ಖ್ಯಾತ ನಟಿ ರುಕ್ಮಿಣಿ ವಸಂತ್ ಅವರಿಗೆ ಮೋಸದ ಕರೆಗಳ ಸಮಸ್ಯೆ ಎದುರಾಗಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕನಕವತಿ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಅವರಿಗೆ ಈಗ ವಂಚಕರ ಕಾಟ ಶುರುವಾಗಿದೆ.
ಈ ಕುರಿತು ಸ್ವತಃ ರುಕ್ಮಿಣಿ ವಸಂತ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವಿವರ ನೀಡಿದ್ದಾರೆ. ತಮ್ಮ ಹೆಸರನ್ನು ದುರುಪಯೋಗಪಡಿಸಿಕೊಂಡು ಕೆಲವರು ವಂಚಿಸುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ನಿರ್ದಿಷ್ಟವಾಗಿ, 9445893273 ನಂಬರ್‌ನಿಂದ ಒಬ್ಬ ವ್ಯಕ್ತಿ ವಿವಿಧ ಜನರಿಗೆ ಕರೆ ಮಾಡಿ ಮೋಸ ಮಾಡುತ್ತಿರುವುದು ಅವರ ಗಮನಕ್ಕೆ ಬಂದಿದೆ. ಈ ಸಂಬಂಧ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.Wildcraft Men's RuNX TR Hugo Blue_Light_Blue Trekking&Hiking Shoes (51657)
“ಈ ಮೊಬೈಲ್ ಸಂಖ್ಯೆ ನನಗೆ ಸೇರಿದ್ದಲ್ಲ. ಇದರಿಂದ ಬರುವ ಯಾವುದೇ ಮೆಸೇಜ್ ಅಥವಾ ಕರೆಗಳು ನಕಲಿ. ಅದು ನಾನಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಅಥವಾ ಅವರೊಂದಿಗೆ ಯಾವುದೇ ವ್ಯವಹಾರ ನಡೆಸಬೇಡಿ,” ಎಂದು ರುಕ್ಮಿಣಿ ವಸಂತ್ ಬರೆದುಕೊಂಡಿದ್ದಾರೆ.ಇದನ್ನು ಓದಿ:ಜೈಲಿನಲ್ಲಿ ರೇಪಿಸ್ಟ್ ಉಮೇಶ್ ರೆಡ್ಡಿಗೆ TV, ಮೊಬೈಲ್, ಬೇಕಾದ ಊಟ....ದರ್ಶನ್‌ಗೆ ಯಾಕಿಲ್ಲ? ಪಾಪ ದಾಸ!
ಈ ರೀತಿಯ ವಂಚನೆಗಳು ಸೈಬರ್ ಅಪರಾಧದ ವ್ಯಾಪ್ತಿಗೆ ಬರುತ್ತವೆ. ವಂಚನೆ ಮತ್ತು ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
“ಈ ಬಗ್ಗೆ ಯಾವುದೇ ಸ್ಪಷ್ಟನೆ ಬೇಕಿದ್ದರೆ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಿ. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ,” ಎಂದು ಅವರು ಸೇರಿಸಿದರು.
ಸೆಲೆಬ್ರಿಟಿಗಳ ಹೆಸರಲ್ಲಿ ಮೋಸ ನಡೆಯುತ್ತಿರುವುದು ಹೊಸದೇನಲ್ಲ. ಫೇಕ್ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸೃಷ್ಟಿಸಿ ಜನರಿಗೆ ವಂಚಿಸಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ, ತಕ್ಷಣವೇ ಮಾಹಿತಿ ನೀಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಕಾರ್ಯ ಮಾಡಲಾಗುತ್ತಿದೆ.