ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಗೌಡ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಹಿಂದೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಈಗಾಗಲೇ ರದ್ದುಪಡಿಸಿತ್ತು. ಆ ಆದೇಶವನ್ನು ಮರುಪರಿಶೀಲಿಸಬೇಕೆಂದು ಪವಿತ್ರಗೌಡ ಪುನರ್ ಪರಿಶೀಲನಾ ಅರ್ಜಿ ಹಾಕಿದ್ದರು.SWISS MILITARY Valise LTB5A 28L Trolley Briefcase Cum Laptop Backpack | Travel Bag with Rain Cover, Laptop Compartment & Trolley Wheels | Black Office Cabin Bag for Men | Convertible & Durable Design
ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವಾದ ನ್ಯಾಯಮೂರ್ತಿ ಜೆ.ಬಿ. ಪರ್ಧಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಇಂದು ವಿಚಾರಣೆ ನಡೆಸಿ ಅರ್ಜಿಯನ್ನು ವಜಾಗೊಳಿಸಿದೆ.ಇದನ್ನು ಓದಿ:ಜೈಲಿನಲ್ಲಿ ರೇಪಿಸ್ಟ್ ಉಮೇಶ್ ರೆಡ್ಡಿಗೆ TV, ಮೊಬೈಲ್, ಬೇಕಾದ ಊಟ....ದರ್ಶನ್‌ಗೆ ಯಾಕಿಲ್ಲ? ಪಾಪ ದಾಸ!
ಪೀಠ ತನ್ನ ಅಭಿಪ್ರಾಯದಲ್ಲಿ, “ನಾವು ಹಿಂದೆಯೇ ಎಲ್ಲಾ ದಾಖಲೆಗಳು ಮತ್ತು ತೀರ್ಪನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.
ಈ ಮೂಲಕ, ಹೈಕೋರ್ಟ್ ಜಾಮೀನನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವೇ ಮುಂದುವರಿಯಲಿದೆ.