ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ, ಖೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, ಮತ್ತೋರ್ವ ಅಧಿಕಾರಿಯನ್ನು ಕೆಲಸದಿಂದ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕ ಮ್ಯಾಗೇರಿ ಹಾಗೂ ಉಪಾಧೀಕ್ಷಕ ಅಶೋಕ್ ಬಜಂತ್ರಿ ಅವರನ್ನು ಅಮಾನತು ಮಾಡಲಾಗಿದ್ದು, ಅಲ್ಲಿನ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು, ಜೈಲಾಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳೊಟ್ಟಿಗೆ ನಡೆಸಿದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ. ಐದು ವರ್ಷಗಳ ನಂತರ, ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಗೃಹ ಸಚಿವರು ತಿಳಿಸಿದ್ದಾರೆ. OPPO K13 5G with 7000mAh and 80W SUPERVOOC Charger in-The-Box, ICY Purple (8GB, 128GB)
ಈ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ವರದಿ ನೀಡಲು ಸೂಚಿಸಲಾಗಿದೆ. ಈ ಸಮಿತಿಯಲ್ಲಿ ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನೊಳಗೊಂಡಿದೆ. ಇದನ್ನೂ ಓದಿ: ಬೆಂಗಳೂರು ಹೊರಭಾಗದ ಪ್ರದೇಶದ ರಸ್ತೆಗಳಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ಹಾವಳಿಯಿಂದ ವಾಹನ ಸವಾರರಿಗೆ ತೊಂದರೆ!