Skip to main content
ವಿಡಿಯೋ
1/3
spirituality

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ “ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ” ಕಾರ್ಯಕ್ರಮಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿರುವ ಶ್ರೀ ತನ್ವೀರ್‌ ಅಹಮದ್‌

By Gireesh Vasishta
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ “ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ” ಕಾರ್ಯಕ್ರಮಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿರುವ ಶ್ರೀ ತನ್ವೀರ್‌ ಅಹಮದ್‌

ಕಾರ್ತಿಕಮಾಸ ಬಹುಳ ಏಕಾದಶಿಯಿಂದ ಆರಂಭಿಸಿ ಅಮಾವಾಸ್ಯೆಯ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು ವಿಜೃಂಭಣೆಯಿಂದ ಜರುಗುತ್ತದೆ. ಈ ಸಮಯದಲ್ಲಿ ರಾಜ್ಯದ ನಾನಾ ಭಾಗಗಳಿಂದ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಸ್ವಾಮಿಯ ದರ್ಶನಕ್ಕೆ ಆಗಮಿಸುತ್ತಾರೆ.

ಧರ್ಮಸ್ಥಳದಲ್ಲಿ ನಡೆಯುವ “ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ” ಕಾರ್ಯಕ್ರಮಕ್ಕೆ ಆಗಮಿಸುವಂತೆ ಡಿ. ವೀರೇಂದ್ರ ಹೆಗ್ಗಡೆಯವರ ಆಹ್ವಾನ ಹಿನ್ನೆಲೆ ಶ್ರೀ ತನ್ವೀರ್‌ ಅಹಮದ್‌ ಉಲ್ಲಾ ಅವರು ಸಾಕಷ್ಟು ಭಕ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ.Monte Carlo Mens Solid Lace Up Genuine Leather Casual Shoes (201803FW)

ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಪತ್ರ ಹೀಗಿದೆ;

ಕಾರ್ತಿಕಮಾಸ ಬಹುಳ ಏಕಾದಶಿಯಿಂದ ಆರಂಭಿಸಿ ಅಮಾವಾಸ್ಯೆಯ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು ವಿಜೃಂಭಣೆಯಿಂದ ಜರುಗುತ್ತದೆ. ಈ ಸಮಯದಲ್ಲಿ ರಾಜ್ಯದ ನಾನಾ ಭಾಗಗಳಿಂದ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಸ್ವಾಮಿಯ ದರ್ಶನಕ್ಕೆ ಆಗಮಿಸುತ್ತಾರೆ.

ಈ ಪವಿತ್ರ ಸಂದರ್ಭದಲ್ಲಿ ಬಂದ ಭಕ್ತರಿಗೆ ಹಾಗೂ ಸಾಹಿತ್ಯ ಕಲಾರಾಧಕರಿಗೆ ನಮ್ಮ ಧರ್ಮ, ಸಾಹಿತ್ಯ ಮತ್ತು ಸಂಸ್ಕೃತಿಗಳ ಬಗ್ಗೆ ಅರಿವು ಮೂಡಿಸಬೇಕೆಂಬ ಸಂಕಲ್ಪದಿಂದ 1933ರಲ್ಲಿ ಅಂದಿನ ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಮಂಜಯ್ಯ ಹೆಗ್ಗಡೆಯವರು “ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳನ್ನು ಆರಂಭಿಸಿದರು. ಅಂದಿನಿಂದ ಅವಿಚ್ಛಿನ್ನವಾಗಿ ನಡೆದುಕೊಂಡು ಬರುತ್ತಿರುವ ಈ ಸಮ್ಮೇಳನಗಳಲ್ಲಿ ನಮ್ಮ ನಾಡಿನ ಹೆಸರಾಂತ ಜ್ಞಾನಿಗಳು, ವಿಜ್ಞಾನಿಗಳು ಮತ್ತು ಸಾಹಿತಿಗಳು ಬಂದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳನ್ನು ಅವಿಸ್ಮರಣೀಯವಾಗುವಂತೆ ನಡೆಸಿಕೊಟ್ಟಿದ್ದಾರೆ. ಇದನ್ನು ಓದಿ; ಬ್ರೇಕಿಂಗ್ ನ್ಯೂಸ್ | ದೆಹಲಿ ಕೆಂಪು ಕೋಟೆ ಸ್ಫೋಟ: ಪುಲ್ವಾಮಾ ಸಂಪರ್ಕ ಬಯಲು!

ಈ ವರ್ಷದ ಕಾರ್ತಿಕ ಮಾಸದ ಶುಭ ಪರ್ವದಲ್ಲಿ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳ 93ನೇ ಅಧಿವೇಶನವು ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ನಡೆಯಲಿದೆ. ಸರ್ವಧರ್ಮ ಸಮ್ಮೇಳನವು ದಿನಾಂಕ: 18-11-2025ನೇ ಮಂಗಳವಾರ ಮತ್ತು ಸಾಹಿತ್ಯ ಸಮ್ಮೇಳನವು ದಿನಾಂಕ: 19-11-2025ನೇ ಬುಧವಾರ ನಡೆಯಲಿದೆ. ತಾವು ಈ ವರ್ಷದ ಸರ್ವಧರ್ಮ

ಸಮ್ಮೇಳನದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಗಿ ಅಪೇಕ್ಷಿಸುತ್ತೇವೆ ಎಂಬ ಅಂಶಗಳು ಪತ್ರದಲ್ಲಿದೆ.