ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ಚಿಕಿತ್ಸೆ ಪಡೆಯುತ್ತಿರುವಾಗಲೇ, ಅವರ ನಿಧನದ ಕುರಿತು ಹಬ್ಬಿದ್ದ ಸುಳ್ಳು ಸುದ್ದಿಗಳಿಗೆ ನಟಿ ಮತ್ತು ಸಂಸದೆ ಹೇಮಾ ಮಾಲಿನಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಈ ವರದಿಗಳು ಕುಟುಂಬಕ್ಕೆ ಬಹಳ ನೋವುಂಟು ಮಾಡಿವೆ.
ಧರ್ಮೇಂದ್ರ ಅವರು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಉಸಿರಾಟದ ಸಮಸ್ಯೆ ಇದ್ದು, ಐಸಿಯುನಲ್ಲಿ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ, ಅವರ ನಿಧನದ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಶೋಕ ಸಂದೇಶಗಳನ್ನು ಹಂಚಿಕೊಳ್ಳಲಾರಂಭಿಸಿದ್ದರು.Safari Genius Alley Set of 3 (Cabin + Medium + Large) Trolley Bags, Hard Case Polypropylene, 4 Wheels, 360 Degree Wheeling Luggage, Suitcase for Travel, Black
ಈ ಬಗ್ಗೆ ಪ್ರತಿಕ್ರಿಯಿಸಿದ ಹೇಮಾ ಮಾಲಿನಿ, "ಇದು ಕ್ಷಮಿಸಲಾಗದು! ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ಇದನ್ನು ಓದಿ:ಹಿರಿಯ ನಟ ಧರ್ಮೇಂದ್ರ ಸ್ಥಿತಿ ಗಂಭೀರ...ಮಗ ಸನ್ನಿ ಡಿಯೋಲ್ ಹೇಳಿದ್ದೇನು? ಇಲ್ಲಿದೆ ಮಾಹಿತಿ
ದಯವಿಟ್ಟು ಕುಟುಂಬಕ್ಕೆ ಮತ್ತು ಅವರ ಖಾಸಗಿತನಕ್ಕೆ ಗೌರವ ನೀಡಿ" ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಜಾವೇದ್ ಅಖ್ತರ್ ಸೇರಿದಂತೆ ಬಾಲಿವುಡ್‌ನ ಕೆಲವು ಗಣ್ಯರು ಸಹ ಧರ್ಮೇಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಆದರೆ, ಹೇಮಾ ಮಾಲಿನಿ ಅವರ ಟ್ವೀಟ್‌ನಿಂದಾಗಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸ್ಪಷ್ಟನೆ ದೊರೆತಿದೆ.
ಧರ್ಮೇಂದ್ರ ಅವರ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ಇಶಾ ಡಿಯೋಲ್, ಅಹಾನಾ ಡಿಯೋಲ್ ಹಾಗೂ ಪತ್ನಿ ಹೇಮಾ ಮಾಲಿನಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಟಿ ಇಶಾ ಡಿಯೋಲ್ ಕೂಡ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ, ತಮ್ಮ ತಂದೆ ಆರೋಗ್ಯವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.