ಯುವತಿಯ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ ಆರೋಪದಡಿ, ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಮೇಲೆ ಕೇಸ್ ದಾಖಲಾಗಿದೆ. ವಿ - 2 ಎಂಬ ಯೂಟ್ಯೂಬ್ ಚಾನಲ್ ನಡೆಸುತ್ತಿರುವ ಮುತ್ತುರಾಜು ಉರುಫ್ ಸೂರ್ಯ ಎನ್ನುವ ಯೂಟ್ಯೂಬರ್ ವಿರುದ್ದ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದಡಿ ಕೋಣನಕುಂಟೆಯ ಆದರ್ಶ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
“ತನ್ನ ಫೇಸ್ ಬುಕ್, ಜಿ-ಮೈಲ್ ಹಾಗೂ ಇನ್ಸ್ಟಾಗ್ರಾಮ್ ಖಾತೆಯನ್ನು ದುರ್ಬಳಕೆ ಮಾಡಿಕೊಂಡು ವೈಯಕ್ತಿಕ ಫೋಟೋಗಳನ್ನು ಕಳವು ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ಪ್ರಶ್ನಿಸಲು ಮನೆಗೆ ಹೋದ ಸಂದರ್ಭದಲ್ಲಿ ಹಲ್ಲೆ ನಡೆಸಿ ದೈಹಿಕವಾಗಿ ಮುಜುಗರವಾಗುವಂತೆ ನಡೆದುಕೊಂಡಿದ್ದು, ದೌರ್ಜನ್ಯ ಎಸಗಿದ್ದಾರೆ. ನನ್ನ ಮೊಬೈಲ್, ಗಡಿಯಾರವನ್ನು ಕಿತ್ತುಕೊಂಡು ಹಾಳು ಮಾಡಿದ್ದಾರೆ” ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. OPPO K13x 5G 6000mAh and 45W SUPERVOOC Charger & AI (Midnight Violet, 128 GB) (6 GB RAM)
“ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿ ಜೊತೆಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿ ಅಸಭ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆ, ದೌರ್ಜನ್ಯ, ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಮತ್ತು ಬೆದರಿಕೆ ಆರೋಪದಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಏಳು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇಲ್ಲವಾದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಇದನ್ನೂ ಓದಿ: ನಿಠಾರಿ ಹತ್ಯಾಕಾಂಡ: ಕೊನೆಯ ಪ್ರಕರಣದಿಂದಲೂ ಆರೋಪಿ ಸುರೇಂದ್ರ ಕೋಲಿಯ ಖುಲಾಸೆ - ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ!