ರಾಜ್ಯದ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆಯಡಿಯಲ್ಲಿ ಬರುವ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರುವ ರೈಲು ನಿಲ್ದಾಣಗಳ ಹೆಸರು ಬದಲಾವಣೆಯ ಕುರಿತಾಗಿ ಪತ್ರ ಬರೆಯಲಾಗಿದೆ. ಈ ಶಿಫಾರಸ್ಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಕೇಂದ್ರಕ್ಕೆ ಸಚಿವರು ಕೋರಿದ್ದಾರೆ. ಸ್ಥಳೀಯ ಸಂಸ್ಕೃತಿಯ ಪ್ರತಿಬಿಂಬವಾಗಿ ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳ ಹೆಸರುಗಳನ್ನು ಸಂತರ ಹೆಸರಿನಲ್ಲಿ ಬದಲಾಯಿಸುವ ಉದ್ದೇಶದಿಂದ, ಇದಕ್ಕೆ ಸಂಬಂಧಿಸಿದ ಪತ್ರವನ್ನು ಕಳುಹಿಸಿರುವ ಮೂಲಕ ರಾಜ್ಯ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ದಿ ಸಚಿವ