Skip to main content
ವಿಡಿಯೋ
1/3
general

ಅಲ್-ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವ ಅಮಾನತು - ದೆಹಲಿ ಸ್ಪೋಟ ಎಫೆಕ್ಟ್

By Vinutha U
ಅಲ್-ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವ ಅಮಾನತು - ದೆಹಲಿ ಸ್ಪೋಟ ಎಫೆಕ್ಟ್

ಭಯೋತ್ಪಾದನಾ ಸಂಪರ್ಕಗಳ ಆರೋಪದ ಮೇಲೆ ಹಿಂದೆ ಜಮ್ಮು ಮತ್ತು ಕಾಶ್ಮೀರ ಆಡಳಿತದಿಂದ ವಜಾಗೊಂಡಿದ್ದ ಪ್ರಾಧ್ಯಾಪಕರೊಬ್ಬರನ್ನು ವಿಶ್ವವಿದ್ಯಾಲಯವು ನೇಮಿಸಿಕೊಂಡಿರುವುದು ಸಹ ಬೆಳಕಿಗೆ ಬಂದಿದೆ.

​ನವದೆಹಲಿ - ಫಾರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಸದಸ್ಯತ್ವವನ್ನು ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟ ಕೂಡಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ವಿಶ್ವವಿದ್ಯಾಲಯವು ಉತ್ತಮ ಸ್ಥಿತಿಯಲ್ಲಿಲ್ಲ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಎಐಯು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಎಐಯು ಪ್ರಧಾನ ಕಾರ್ಯದರ್ಶಿ ಡಾ. ಪಂಕಜ್ ಮಿತ್ತಲ್ ಅವರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭೂಪಿಂದರ್ ಕೌರ್ ಆನಂದ್ ಅವರಿಗೆ ಪತ್ರ ಬರೆದಿದ್ದು ಎಐಯು ಬೈಲಾಗಳ ಪ್ರಕಾರ ಎಲ್ಲಾ ವಿಶ್ವವಿದ್ಯಾಲಯಗಳು ಉತ್ತಮ ಸ್ಥಿತಿಯಲ್ಲಿ ಇರುವವರೆಗೆ ಮಾತ್ರ ಸದಸ್ಯತ್ವವನ್ನು ಉಳಿಸಿಕೊಳ್ಳಲು ಅರ್ಹವಾಗಿರುತ್ತವೆ ಎಂದು ತಿಳಿಸಿದ್ದಾರೆ.

​ಎಐಯು ಈ ಕ್ರಮಕ್ಕೆ ಮುಂದಾಗಿರುವುದು ಇತ್ತೀಚೆಗೆ ದೆಹಲಿಯ ರೆಡ್ ಫೋರ್ಟ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅಲ್-ಫಲಾಹ್ ವಿಶ್ವವಿದ್ಯಾಲಯ ತೀವ್ರ ಪರಿಶೀಲನೆಗೆ ಒಳಪಟ್ಟಿರುವುದೇ ಮುಖ್ಯ ಕಾರಣ ಎಂದು ತಿಳಿದುಬಂದಿದೆ. ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರು ಭೇದಿಸಿದ ವೈಟ್ ಕಾಲರ್ ಟೆರರ್ ಮಾಡ್ಯೂಲ್ ಗೆ ವಿಶ್ವವಿದ್ಯಾಲಯದ ಮೂವರು ವೈದ್ಯರು ಮತ್ತು ಇತರ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. INHEAVEN Bridal Princess Girl Tiara and Rhinestone Crown Headband Hair Accessories for Women Wedding Ceremony Party (Multicolor)

ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ನೇಮಕಾತಿ ನೀತಿಗಳು ಮತ್ತು ಹಣಕಾಸು ವ್ಯವಹಾರಗಳ ಬಗ್ಗೆಯೂ ತನಿಖೆಗಳು ನಡೆಯುತ್ತಿವೆ.

​ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯು ಮಾನ್ಯತೆ ಅವಧಿ ಮುಗಿದಿದ್ದರೂ ವಿಶ್ವವಿದ್ಯಾಲಯವು ತನ್ನ ವೆಬ್‌ಸೈಟ್‌ನಲ್ಲಿ ಸುಳ್ಳು ಮಾನ್ಯತಾ ಹಕ್ಕುಗಳನ್ನು ಪ್ರದರ್ಶಿಸಿದ್ದಕ್ಕಾಗಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ​ಭಯೋತ್ಪಾದನಾ ಸಂಪರ್ಕಗಳ ಆರೋಪದ ಮೇಲೆ ಹಿಂದೆ ಜಮ್ಮು ಮತ್ತು ಕಾಶ್ಮೀರ ಆಡಳಿತದಿಂದ ವಜಾಗೊಂಡಿದ್ದ ಪ್ರಾಧ್ಯಾಪಕರೊಬ್ಬರನ್ನು ವಿಶ್ವವಿದ್ಯಾಲಯವು ನೇಮಿಸಿಕೊಂಡಿರುವುದು ಸಹ ಬೆಳಕಿಗೆ ಬಂದಿದೆ. ಪಾಸ್‌ಪೋರ್ಟ್ #ಗ್ಲೋಬ್‌ಟ್ರಾಟರ್ ಅಭಿಯಾನಕ್ಕೆ ಯಶಸ್ಸು

​ಅಲ್ ಫಲಾಹ್ ವಿಶ್ವವಿದ್ಯಾಲಯವು ತನ್ನ ಯಾವುದೇ ಚಟುವಟಿಕೆಗಳಲ್ಲಿ ಇನ್ನು ಮುಂದೆ ಎಐಯು ಹೆಸರು ಅಥವಾ ಲೋಗೋ ಅನ್ನು ಬಳಸುವಂತಿಲ್ಲ. ​ವಿಶ್ವವಿದ್ಯಾಲಯವು ಕೂಡಲೇ ತನ್ನ ಅಧಿಕೃತ ವೆಬ್‌ಸೈಟ್‌ನಿಂದ ಎಐಯು ಲೋಗೋವನ್ನು ತೆಗೆದುಹಾಕಬೇಕು.​ ಈ ಅಮಾನತು ಶಿಕ್ಷಣ ವಲಯದಲ್ಲಿ ತಲ್ಲಣ ಮೂಡಿಸಿದೆ ಮತ್ತು ವಿಶ್ವವಿದ್ಯಾಲಯದ ಘನತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬೆಳವಣಿಗೆಯ ಕುರಿತು ಸದ್ಯ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.