ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು ಅನಾರೋಗ್ಯ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೆಹಲಿ ಪ್ರವಾಸದಿಂದ ದಿಢೀರನೆ ಆಗಮಿಸಿ, ಶೇಷಾದ್ರಿಪುರಂನ ಅಪೊಲೊ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರ ಆರೋಗ್ಯ ವಿಚಾರಿಸಿದ ನಂತರ, ಅರ್ಧ ಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಅವರು, ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದರು. ಈ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಶ್ವಾಸಕೋಶ ಸೋಂಕು ಇದ್ದ ಕಾರಣ ಆಸ್ಪತ್ರೆಗೆ ದಾಖಲಿ