ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ವರದಿ ತಿಳಿಸಿದೆ.
ಈ ಕುರಿತಾಗಿ ಭಾರತೀಯ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನೀಡಿದ್ದು, ಪ್ರಮುಖವಾಗಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕಲಬುರಗಿ, ಬೀದರ್ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ಸೂಚಿಸಿದೆ. realme 14x 5G Smartphone 8+128GB red, 6.67-inch Screen, 120Hz Display, 6000mAh Battery, 80MP, MediaTek Dimensity 6300, ArmorShell Protection, IP69
ಮುಂದಿನ 24 ರಿಂದ 48 ಗಂಟೆಗಳಲ್ಲಿ ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಗಾಳಿ - ಮಳೆ ಪ್ರಭಾವ ಬೀರಲಿದ್ದು, ಕರಾವಳಿ ಪ್ರದೇಶಗಳು, ಉತ್ತರ ಕರ್ನಾಟಕ ಭಾಗಗಳು ಸೇರಿದಂತೆ ಬೆಂಗಳೂರಿನ ಹವಾಮಾನದ ಮೇಲೆಯೂ ವ್ಯತಿರಿಕ್ತ ವಾತಾವರಣ ಉಂಟಾಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ. ಇದನ್ನೂ ಓದಿ: New Labour Codes - ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳು ಜಾರಿ - ನ.26 ಕ್ಕೆ ವಿರೋಧಿತ ಪ್ರತಿಭಟನೆ!