ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢವನ್ನು ಸಂವಿಧಾನದ 240 ನೇ ವಿಧಿಗೆ ಸೇರ್ಪಡಿಸಿ, ರಾಷ್ಟ್ರಪತಿಯಿಂದ ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ನೇಮಿಸುವ ಮಸೂದೆ ಮಂಡನೆಯನ್ನು ಕೇಂದ್ರ ಸರ್ಕಾರವು ಯೋಜಿಸಿದೆ. ಡಿಸೆಂಬರ್ 1 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನದ 131ನೇ ತಿದ್ದುಪಡಿಯ ಮಸೂದೆಯನ್ನು ಪರಿಚಯಿಸಲು ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ರಾಜಕೀಯ ವಿವಾದ ಭುಗಿಲೆದಿದ್ದು, ಈ ಕುರಿತ ಭಾರಿ ವಿರೋಧ ಕೇಳಿಬಂದಿದೆ. ಪಂಜಾಬ್