ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವಿನ ಅಧಿಕಾರ ಹಸ್ತಾಂತರ ವಿಚಾರವಾಗಿ ಸರ್ಕಾರದ ಕೆಲಸಗಳು ವಿಳಂಬವಾಗುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಈ ಬಗ್ಗೆ ಮುಂದಿನ ಸಿಎಂ ಯಾರೆಂದು ಪಕ್ಷದ ಹೈಕಮಾಂಡ್ ಸ್ಪಷ್ಟಪಡಿಸಬೇಕೆಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಯಾರಿಗೆಂದು ಹುಟ್ಟಿಕೊಂಡಿರುವ ವಾದಗಳಿಂದ ಆಡಳಿತ ಯಂತ್ರವು ನಿಷ್ಕ್ರಿಯವಾಗಿದೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ತೆಗೆದುಕೊಳ್ಳದಿದ್ದರೆ, ಸರ್ಕಾರದ ಕೆಲಸಗಳು ನಡ