ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಸಿನಿಮಾ ನಾಳೆ (ಡಿಸೆಂಬರ್ 05) ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ಜೊತೆಗೆ ಆಂಧ್ರ ಪ್ರದೇಶದಲ್ಲೂ ಇಂದು ರಾತ್ರಿ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸಲಾಗುತ್ತಿದೆ. ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಸಿನಿಮಾಗೂ ಜನರಲ್ಲಿ ಭಾರೀ ನಿರೀಕ್ಷೆ ಇದೆ. ಇದೇ ಕಾರಣಕ್ಕೆ ಟಿಕೆಟ್ ದರಗಳನ್ನು ಹೆಚ್ಚಿಸಲಾಗಿದೆ.‘ಅಖಂಡ’ ಸಿನಿಮಾದಲ್ಲಿ ಬಾಲಕೃಷ್ಣ ಅವರು ಅಘೋರಿಯಾಗಿ ನಟಿಸಿದ್ದರು. ಆ ಪಾತ್ರ, ಆಕ್ಷನ್ ದೃಶ್ಯಗಳು ಮತ್ತು ಬೊಯಪಾಟಿ ಸೀನು ನಿರ್ದೇಶನ ಒಟ್ಟಾಗಿ ಚಿತ್ರ ಬ್ಲಾಕ್‌ಬಸ್ಟರ್ ಆಗಿತ್ತು. ಈಗ ಎರಡನೇ ಭಾಗ ಬಿಡುಗಡೆಯಾಗುತ್ತಿರುವುದರಿಂದ, ಅಭಿಮಾನಿಗಳು ಪ್ರೀಮಿಯರ್ ಮಾಡಲು ಕಾಯುತ್ತಿದ್ದ