ಬೆಂಗಳೂರು: "ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು, ಕರ್ನಾಟಕವು ಭ್ರಷ್ಟಾಚಾರದ ಪಟ್ಟಿಯಲ್ಲಿ ದೇಶದಲ್ಲೇ ಐದನೆಯ ಸ್ಥಾನ ಪಡೆದಿದೆ. ಈ ಪಿಡುಗನ್ನು ತಡೆಯದೇ ಹೋದಲ್ಲಿ, ಭವಿಷ್ಯದಲ್ಲಿ ಸಮಾಜಕ್ಕೆ ಭೀಕರ ಅಪಾಯ ಕಟ್ಟಿಟ್ಟ ಬುತ್ತಿ" ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಕೀಲ ತುಳವನೂರು ಶಂಕರಪ್ಪ ಅವರು ಬರೆದಿರುವ ‘ಓವರ್ಸೀಸ್ ಟ್ರಾವೆಲಾಗ್’ ಪ್ರವಾಸ ಕಥನ ಬಿಡುಗಡೆ ಸಮಾರಂಭದಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿನ ಭ್ರಷ್ಟಾಚಾರದ ಪ್ರಮಾಣದ ಕುರಿತು ಆಘಾತಕಾರಿ ಅಂಕಿ-ಅಂಶಗಳನ್ನು ನೀಡಿದರು.ಕರ್ನಾಟಕ VS ಕೇರಳ: ಭ್ರಷ್ಟಾಚಾ