ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಜಿರೆ ಗ್ರಾಮದ ಬಾಡಾರುವಿನಲ್ಲಿರುವ ಶ್ರೀ ಕೊರಗಜ್ಜಸ್ವಾಮಿ ದೇವಸ್ಥಾನಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿ ಖಾಸಗಿ ಜಾಗದ ಮಾಲಿಕರಿಗಾಗಿ ಓಡಾಡಲು ರಸ್ತೆ ನಿರ್ಮಾಣ ಮಾಡದಂತೆ ಕರ್ನಾಟಕ ಹೈ ಕೋರ್ಟ್ ಬುಧವಾರ ಮಹತ್ವದ ತೀರ್ಪೂ ನೀಡಿದೆ. ನ್ಯಾಯಾಲಯದ ನಿರ್ದೇಶನವೇನು?ಬಜಿರೆ ಗ್ರಾಮದ ಕೊರಗ ಕಲ್ಲು ಶ್ರೀಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ (ರಿ) ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ, ಈ ಆದೇಶ ನೀಡಿದೆ.ಬಜಿರೆ ಗ್ರಾಮದ ಬಾಡಾರು ಪ್ರದೇಶದ ಸರ್ವೆ ನಂಬರ್ 39/1ಎ ರ