ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ವಿಧೇಯಕಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ. ಈ ಐತಿಹಾಸಿಕ ವಿಧೇಯಕವು ಕರ್ನಾಟಕದಲ್ಲಿ ಸಾಮಾಜಿಕ ಬಹಿಷ್ಕಾರವನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡುವ ಗುರಿ ಹೊಂದಿದೆ.ಸಮಾಜದಲ್ಲಿ ಯಾವುದೇ ವ್ಯಕ್ತಿ ಅಥವಾ ಕುಟುಂಬವನ್ನು ಗ್ರಾಮ ಅಥವಾ ಸಮುದಾಯದಿಂದ ಹೊರಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ಹೇರುವುದು, ಹಾಗೂ ಸಾರ್ವಜನಿಕ ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿಪಡಿಸುವುದನ್ನು ಈ ವಿಧೇಯಕವು ನಿರ್ಬಂಧಿಸಲಿದೆ.I Jewel