ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯ ಬದಲಾವಣೆ ಕುರಿತು ಟ್ವೀಟ್ ಮಾಡಿದ್ದ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕೋಮು ದ್ವೇಷದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಹರಿತವಾದ ಪ್ರಶ್ನೆಗಳನ್ನು ಎತ್ತಿದ್ದಾರೆ.ಪ್ರಕರಣದ ಹಿನ್ನೆಲೆ ಏನು?ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ, ಶುಕ್ರವಾರದ ಪರೀಕ್ಷೆಯನ್ನು ಬೆಳಗಿನ ಜಾವದ ಬದಲು ಮಧ್ಯಾಹ್ನಕ್ಕೆ ನಿಗದಿಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಸೂಲಿಬೆಲೆ, "ಎಲ್ಲಾ ಪರೀಕ್ಷೆಗ