ಲಕ್ನೋ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ಲಕ್ನೋದಲ್ಲಿ ಹಮ್ಮಿಕೊಳ್ಳಲಾಗಿದ್ದ 'ರಾಷ್ಟ್ರೀಯ ಪ್ರೇರಣಾ ಸ್ಥಳ'ದ ಉದ್ಘಾಟನಾ ಸಮಾರಂಭದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆಯ ಮೇಲೆ ಭಾಷಣ ಮಾಡುತ್ತಿದ್ದಂತೆಯೇ, ಸಭಿಕರ ಗ್ಯಾಲರಿಯಲ್ಲಿ ಸಮೋಸಕ್ಕಾಗಿ ಜನರು ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಘಟನೆಯ ವಿವರ:ಡಿಸೆಂಬರ್ 25ರಂದು ವಾಜಪೇಯಿ ಅವರ ಸ್ಮರಣಾರ್ಥ ನಿರ್ಮಿಸಲಾದ ಭವ್ಯ ಸ್ಮಾರಕವನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕ