Skip to main content
ವಿಡಿಯೋ
1/2
general

ಗೃಹಲಕ್ಷ್ಮಿ ಹಣ ಬಿಡುಗಡೆಗೆ ವಿಳಂಬ: ಸರ್ಕಾರದ ವಿರುದ್ಧ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ..!

By Sushmitha R
ಗೃಹಲಕ್ಷ್ಮಿ ಹಣ ಬಿಡುಗಡೆಗೆ ವಿಳಂಬ: ಸರ್ಕಾರದ ವಿರುದ್ಧ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ..!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಹಣ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಹಣ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಪೂರಕ ಬಜೆಟ್‌ನಲ್ಲಿ ಯೋಜನೆಯ ಅನುದಾನದ ಕುರಿತು ಸ್ಪಷ್ಟತೆ ಇಲ್ಲದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಅನೇಕ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಬಡ ಮಹಿಳೆಯರು ಈ ಹಣಕ್ಕಾಗಿ ಕಾಯುತ್ತಿದ್ದಾರೆ, ಆದರೆ ಸರ್ಕಾರ ಮಾತ್ರ ಈ ಬಗ್ಗೆ ಮೌನ ವಹಿಸಿದೆ, ಎಂದು ಆರೋಪಿಸಿದರು. ರಾಜ್ಯಾದ್ಯಂತ ಲಕ್ಷಾಂತರ ಮಹಿಳೆಯರು ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ ಎಂಬುದು ಅವರ ಪ್ರಮುಖ ದೂರಾಗಿತ್ತು.Studio Shringaar Women's Net sequence Embroidered Full Size Dupatta

ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲೇ ನಾನು ಈ ವಿಚಾರವನ್ನು ಪ್ರಸ್ತಾಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಆಗ ಮುಖ್ಯಮಂತ್ರಿಗಳು, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಆದಷ್ಟು ಬೇಗ ಎಲ್ಲಾ ಬಾಕಿ ಹಣವನ್ನು ಮಹಿಳೆಯರ ಖಾತೆಗೆ ಹಾಕುತ್ತೇವೆ ಎಂದು ಸದನದಲ್ಲಿ ಭರವಸೆ ನೀಡಿದ್ದರು.

ಆದರೆ ಆ ಭರವಸೆ ಇನ್ನೂ ಈಡೇರಿಲ್ಲ, ಎಂದು ಅವರು ಬೇಸರ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಈ ಯೋಜನೆಯನ್ನು ಮುಂದುವರಿಸಲು ಹಣದ ಕೊರತೆ ಎದುರಾಗಿದೆಯೇ? ಹಾಗಾದರೆ ಆ ಐದು ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು? ಸರ್ಕಾರ ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಅಥವಾ ಜನರಿಗೆ ಸ್ಪಷ್ಟನೆ ನೀಡಬೇಕು, ಎಂದು ಆಗ್ರಹಿಸಿದರು.ಇದನ್ನು ಓದಿ: 2025ರ ಫ್ಲ್ಯಾಶ್‌ಬ್ಯಾಕ್: ಭಾರತವನ್ನು ಬೆಚ್ಚಿಬೀಳಿಸಿದ ಆ ಭೀಕರ ಘಟನೆಗಳ ಸಮಗ್ರ ಮಾಹಿತಿ