ನವದೆಹಲಿ: ಕೇಂದ್ರ ಸರ್ಕಾರವು ದೇಶದ ವಿವಿಧ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಗುರುವಾರ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಕೊಲೇಜಿಯಂ ಶಿಫಾರಸಿನಂತೆ ಈ ನೇಮಕಾತಿಗಳು ನಡೆದಿವೆ.ಪ್ರಮುಖ ನೇಮಕಾತಿಗಳು ಮತ್ತು ವರ್ಗಾವಣೆ:* ನ್ಯಾ. ರೇವತಿ ಮೋಹಿತೆ ಡೇರೆ: ಬಾಂಬೆ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿಯಾಗಿದ್ದ ಇವರನ್ನು ಮೇಘಾಲಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.* ನ್ಯಾ. ಸಂಗಂ ಕುಮಾರ್ ಸಾಹೂ: ಒಡಿಶಾ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ಇವರನ್ನು ಪಾಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಿ ನೇಮಕ ಮಾಡಲಾ