ರಾಜ್ಯದಲ್ಲಿ ಇವಿಎಂ ಯಂತ್ರಗಳ ಬಳಸಿರುವ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ತಿಳಿಸಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ. ನಾಗರಾಜ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕರ್ನಾಟಕದಲ್ಲಿ ಚುನಾವಣಾ ಆಯೋಗವು ಸಮೀಕ್ಷೆ ನಡೆಸಿ ಶೇ.85 ರಷ್ಟು ಜನರು ವಿದ್ಯುನ್ಮಾನ ಮತಯಂತ್ರಗಳ ಕುರಿತ ವಿಶ್ವಾಸ ವ್ಯಕ್ತಪಡಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು ಎನ್ನಲಾಗಿದೆ.
ಕೆಲ ದಿನಪತ್ರಿಕೆಗಳಲ್ಲಿ ಇವಿಎಂ ಬಳಕೆಗಳ ಕುರಿತು ರಾಜ್ಯ ಚುನಾವಣಾ ಆಯೋಗವು ಸಮೀಕ್ಷೆ ನಡೆಸಿ ಕರ್ನಾಟಕದ 83% ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟವಾಗಿರುವ ಸುದ್ದಿಗಳನ್ನು ಆಯೋಗವು ಗಮನಿಸಿದೆ, ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. HP 15, 13th Gen Intel Core i3-1315U (12GB DDR4, 512GB SSD) FHD, Anti-Glare, Micro-Edge, 15.6''/39.6cm, Win11, M365 Basic(1yr)* Office24, Silver, 1.59kg, fd0573TU, FHD Camera w/Shutter Laptop
2ನೇ ಹಂತದ ಎಸ್‌ಐಆರ್ -
ದೇಶದ ಒಂಬತ್ತು ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೈಗೊಂಡಿರುವ ಎಸ್‌ಐಆರ್ 2ನೇ ಹಂತದ ಪ್ರಕ್ರಿಯೆ ಕಳೆದ ಅಕ್ಟೋಬರ್‌ನಲ್ಲಿ ಆರಂಭಗೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗ ಕರಡು ಪಟ್ಟಿಯನ್ನು ಪ್ರಕಟಿಸಿದ್ದು, ಒಟ್ಟು 6.5 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ. ಇದರಿಂದಾಗಿ, ಪ್ರಕ್ರಿಯೆಗೂ ಮುನ್ನ ಇದ್ದ 50. 90 ಕೋಟಿ ಮತದಾರರಿಂದ 44.40 ಕೋಟಿ ಮತದಾರರ ಸಂಖ್ಯೆಗೆ ಇಳಿಕೆಯಾಗಿದೆ ಎಂದು ವರದಿಯು ತಿಳಿಸಿದೆ. ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ!