ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟೀಸರ್ ಡಿಜಿಟಲ್ ವೇದಿಕೆಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ ಈ ಟೀಸರ್ 200 ಮಿಲಿಯನ್ ಅಂದರೆ 20 ಕೋಟಿ ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ನಿರ್ಮಿಸಿದೆ. ಈ ಮೂಲಕ ‘ಕೆಜಿಎಫ್ 2’, ‘ಕಾಂತಾರ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಹಿಂದಿನ ದಾಖಲೆಗಳನ್ನು ‘ಟಾಕ್ಸಿಕ್’ ಟೀಸರ್ ಮುರಿದಿದೆ.Arayna Women's Cotton Printed Floral Straight Kurta with Palazzo Pants and Dupatta
‘ಟಾಕ್ಸಿಕ್’ ಟೀಸರ್ ಯೂಟ್ಯೂಬ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಸೇರಿದಂತೆ ವಿವಿಧ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲ ವೇದಿಕೆಗಳ ಒಟ್ಟು ವೀಕ್ಷಣೆಗಳನ್ನು ಲೆಕ್ಕಕ್ಕೆ ತೆಗೆದುಕೊಂಡು ಈ ಸಂಖ್ಯೆ ಘೋಷಿಸಲಾಗಿದೆ. ಟೀಸರ್‌ಗೆ 55 ಲಕ್ಷಕ್ಕೂ ಹೆಚ್ಚು ಲೈಕ್ಸ್ ಸಿಕ್ಕಿದ್ದು, ಇದು ಸಿನಿಮಾದ ಮೇಲಿನ ಜನರ ಭಾರಿ ನಿರೀಕ್ಷೆಯನ್ನು ತೋರಿಸುತ್ತದೆ. ಕೆವಿಎನ್ ಪ್ರೊಡಕ್ಷನ್ಸ್ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.ಇದನ್ನು ಓದಿ:ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಯಾಕೆ ಇಂಥ ಸ್ಥಿತಿಗೆ ತಲುಪಿತು..? ಇಲ್ಲಿದೆ ಸಂಪೂರ್ಣ ಮಾಹಿತಿ!
ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರದಲ್ಲಿ ಯಶ್ ಜೊತೆ ತಾರಾ ಸುತಾರಿಯಾ, ನಯನತಾರಾ, ಕಿಯಾರಾ ಅಡ್ವಾಣಿ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ಟೀಸರ್‌ಗೆ ಸಿಕ್ಕಿರುವ ಭರ್ಜರಿ ಪ್ರತಿಕ್ರಿಯೆಯಿಂದಾಗಿ, ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ದಾಖಲೆ ನಿರ್ಮಿಸುವ ನಿರೀಕ್ಷೆ ಹೆಚ್ಚಾಗಿದೆ.