2026 ರಲ್ಲಿ, ರಾಜಕೀಯ ಪಾಳಯದಲ್ಲಿ ಚುನಾವಣಾ ಪರ್ವ ರಂಗೇರಿದೆ. ಚುನಾವಣಾ ಹಿನ್ನೆಲೆಯಲ್ಲಿ, ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಳ್ಳುತ್ತಿದ್ದು, ಚುನಾವಣಾ ಅಖಾಡ ಸಿದ್ಧಗೊಳ್ಳುತ್ತಿದೆ. ಈ ನಡುವಲ್ಲಿ, ರಾಜಕೀಯ ಪಕ್ಷಗಳಲ್ಲೂ ಚುನಾವಣಾ ಕಾಳಗ ಬಲಗೊಂಡಿದೆ.
ಎಲ್ಲಾ ಚುನಾವಣೆಗಳಲ್ಲೂ ಮೈತ್ರಿಗೆ ಒಲವು ತೋರಿರುವ ಜೆಡಿಎಸ್-ಬಿಜೆಪಿ ಮೈತ್ರಿಗೆ ಕೆಲವರು ಆಗ್ರಹ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಭಿನ್ನರಾಗ ಕೇಳಿಬಂದಿದೆ. ಜೆಡಿಎಸ್ ಎಲ್ಲಾ ಚುನಾವಣೆಗಳಲ್ಲೂ ಒಟ್ಟಾಗಿ ಇರಲು ಬಯಸಿದರೆ ಬಿಜೆಪಿಗರು ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಭಿನ್ನಹ ಕೇಳಿ ಬಂದಿದೆ ಎನ್ನಲಾಗುತ್ತಿದೆ. amazon basics Back Case Cover for Mi Redmi 13C 5G | Compatible for Mi Redmi 13C 5G Back Case Cover | Case Cover with Camera Protection | (TPU + PC | Transparent)
ಈ ವರ್ಷ ಸಾಲು ಸಾಲು ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ರಾಜಕೀಯ ನಾಯಕರ ಒಲವು-ಗೆಲುವು ಸ್ಥಳೀಯ ಮಟ್ಟದಲ್ಲಿ ಹೇಗಿರಲಿದೆ ಎಂಬ ಬಗ್ಗೆ ಕುತೂಹಲ ಉಂಟಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಮೈತ್ರಿ ವಿಚಾರ ಬಿಜೆಪಿ-ಜೆಡಿಎಸ್‌ಗೆ ಕಗ್ಗಂಟಾಗಿ ಪರಿಣಮಿಸಿದ್ದು, ಜೆಡಿಎಸ್ ಜೊತೆ ಮೈತ್ರಿಗೆ ಕೆಲವರು ವಿರೋಧ ವ್ಯಕ್ತಪಡಿಸಿರುವ ಕಾರಣ ಬಿಜೆಪಿ ಹೈಕಮಾಂಡ್ ಜೊತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕರಾದ ಹೆಚ್.ಡಿ ಕುಮಾರಸ್ವಾಮಿ ಅವರು ಸದ್ಯದಲ್ಲೇ ಬಿಜೆಪಿ ಹೈಕಮಾಂಡ್ ಜೊತೆ ಸಭೆ ನಡೆಸಲಿದ್ದಾರೆ ಎಂದು ಸುದ್ದಿ ವರದಿಯಾಗಿದೆ.
ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ಬಿಜೆಪಿಯಿಂದ ವಿರೋಧ ಕೇಳಿಬಂದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಧ್ಯಕ್ಷರು ಹಾಗೂ ಕೋರ್ ಕಮಿಟಿ ಸದಸ್ಯರ ಮುಂದೆ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ. ಕಾರ್ಯಕರ್ತರು, ಮುಖಂಡರ ನಡುವೆ ಗೊಂದಲ ಉಂಟಾದರೆ, ಕಾಂಗ್ರೆಸ್‌ಗೆ ಲಾಭ ಆಗಲಿದೆ. ಈ ಗೊಂದಲದ ನಡುವೆಯೂ ಎಲ್ಲಾ ಚುನಾವಣೆಗೂ ಮೈತ್ರಿಯಲ್ಲೇ ಹೋಗೋಣ ಎಂಬುದು ಜೆಡಿಎಸ್ ಮುಖಂಡರ ನಿಲುವು ಎನ್ನಲಾಗಿದೆ. ಈ ನಿಟ್ಟಿನಲ್ಲಿ, ಎರಡೂ ಪಕ್ಷಗಳ ಸ್ವಂತ ಬಲಾಬಲಗಳ ಮೇಲೆ ಪರೀಕ್ಷೆ ಎದುರುಗೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಕರ್ನಾಟಕ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ - ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಹಂಚಿಕೆ ಪ್ರಕಟಕ್ಕೆ ವೇಗ!?