ಕರ್ನಾಟಕ ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾದ ಚರ್ಚೆಗಳಿಗೆ ಇದೀಗ ತೆರೆ ಬಿದ್ದಂತಿದೆ. ಹೈಕಮಾಂಡ್ ಸೂಚನೆಯಂತೆ ಬಿ.ವೈ. ವಿಜಯೇಂದ್ರ ಅವರನ್ನೇ 2028ರ ವಿಧಾನಸಭಾ ಚುನಾವಣೆಯವರೆಗೂ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ, ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇದರ ಭಾಗವಾಗಿ ನಿತಿನ್ ನಬಿನ್ ಅವರನ್ನು ಎರಡನೇ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. Shining Diva Fashion Latest Stylish Multilayer Gold Plated Bangle Bracelet for Women and Girls (rr14669b) Set of 6
ಜನವರಿ 20ರಂದು ರಾಷ್ಟ್ರೀಯ ಮತ್ತು ವಿವಿಧ ರಾಜ್ಯ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮಧ್ಯಪ್ರದೇಶ, ಗುಜರಾತ್ ಹಾಗೂ ಬಿಹಾರ ಸೇರಿದಂತೆ 30ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ.
ರಾಷ್ಟ್ರಮಟ್ಟದಲ್ಲಿ ಬದಲಾವಣೆಗಳಾಗುತ್ತಿದ್ದರೂ, ಕರ್ನಾಟಕದ ಮಟ್ಟಿಗೆ ಹೈಕಮಾಂಡ್ ಸ್ಥಿರತೆಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರ ನಾಯಕತ್ವದ ಬಗ್ಗೆ ಪಕ್ಷದೊಳಗೆ ಪರ-ವಿರೋಧ ಚರ್ಚೆಗಳಿದ್ದರೂ, 2028ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅವರನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ. ಇದು ವಿಜಯೇಂದ್ರ ವಿರೋಧಿ ಬಣಕ್ಕೆ ಅಥವಾ ಬದಲಾವಣೆಯ ನಿರೀಕ್ಷೆಯಲ್ಲಿದ್ದ 'ರೆಬೆಲ್' ನಾಯಕರಿಗೆ ಹಿನ್ನಡೆಯಾಗಿ ಪರಿಣಮಿಸಿದೆ.ಇದನ್ನು ಓದಿ: 2026: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಚುನಾವಣಾ ಅಬ್ಬರ..!
ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ನಿರಂತರವಾಗಿ ವಂಶಪಾರಂಪರ್ಯ ರಾಜಕಾರಣದ ಆರೋಪ ಮಾಡುತ್ತಾ ಬಂದಿತ್ತು.
ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ದೂರುಗಳೂ ಕೇಳಿಬಂದಿದ್ದವು. ಆದರೆ, ಇತ್ತೀಚೆಗೆ ಶಿಸ್ತು ಸಮಿತಿಯ ಶಿಫಾರಸಿನಂತೆ ಯತ್ನಾಳ್, ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರಂತಹ ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದ ನಂತರ ಭಿನ್ನಮತದ ಧ್ವನಿ ತುಸು ತಣ್ಣಗಾಗಿದೆ.
ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೂ, ಹೈಕಮಾಂಡ್ ವಿಜಯೇಂದ್ರ ಅವರ ಸಂಘಟನಾ ಶಕ್ತಿಯ ಮೇಲೆ ನಂಬಿಕೆ ಇಟ್ಟಿದೆ. ಸದ್ಯಕ್ಕೆ ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲದಿರುವುದು ವಿಜಯೇಂದ್ರ ಅವರ ಕೈ ಬಲಪಡಿಸಿದಂತಾಗಿದೆ.ಇದನ್ನು ಓದಿ: ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಭಿನ್ನಹ - ಹೆಚ್‌ಡಿಕೆ ಮುಂದಿನ ನಡೆ ಏನು!?