ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ಎಲ್ಲಾ ಸ್ಥಳೀಯ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ನಲ್ಲಿಯೇ ನಡೆಸಲು ರಾಜ್ಯ ಚುನಾವಣಾ ಆಯೋಗವು ನಿರ್ಧರಿಸಿರಿದೆ ಎಂದು ವರದಿಯಾಗಿದೆ. ಮೇ 25 ರ ನಂತರ ನಡೆಯಲಿರುವ ಚುನಾವಣೆಗಳನ್ನು ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡುವುದಾಗಿ ಆಯೋಗವು ತಿಳಿಸಿದೆ. ಬ್ಯಾಲೆಟ್ ಪೇಪರ್ ಬಳಸಬಾರದೆಂದು ಸುಪ್ರೀಂಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ನಿರಂತರ ವೋಟ್ ಚೋರಿ ಪ್ರಕರಣದ ಆರೋಪಗಳ ನಡುವೆ, ರಾಜ್ಯ ಚುನಾವಣಾ ಆಯೋಗವು, ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ತಿಳಿಸಿರುವುದು ಚರ್ಚೆಗೀಡು ಮಾಡಿದೆ ಎನ್ನಲಾಗಿದೆ. ಸೋಮವಾರ (ಜ.19) ದಂದು, ಜಿಬಿಎ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದ ಮತದಾರರ ಕರಡುಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿ 8,91,411 ಮತದಾರರಿದ್ದಾರೆ ಎಂದು ತಿಳಿಸಿದೆ. SanDisk Extreme Pro SD UHS I 128GB Card for 4K Video for DSLR and Mirrorless Cameras 200MB/s Read & 90MB/s Write
ಈ ವೇಳೆ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ಅವರು, ವಿಧಾನಸಭೆ ಚುನಾವಣೆ ಹೊರತುಪಡಿಸಿ, ಜಿಬಿಎ ಚುನಾವಣೆ, ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲಿಯೇ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸ್ಥಳೀಯ ಚುನಾವಣೆಗಳನ್ನು ಮೇ ಅಥವಾ ಜೂನ್ ನಲ್ಲಿ ನಡೆಸಬೇಕೆಂದಿದ್ದೇವೆ ಎಂದರು. ಇದನ್ನೂ ಓದಿ: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ - 88.91 ಲಕ್ಷ ಮತದಾರರ ಕರಡುಪಟ್ಟಿ ಬಿಡುಗಡೆ!?