Skip to main content
ವಿಡಿಯೋ
crime

ಮನೆ ಊಟಕ್ಕೆ ಹೈಕೋರ್ಟ್ ತಡೆ: ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ವಿಶೇಷ ಸವಲತ್ತು ರದ್ದು

By Ram Chethan
ಮನೆ ಊಟಕ್ಕೆ ಹೈಕೋರ್ಟ್ ತಡೆ: ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ವಿಶೇಷ ಸವಲತ್ತು ರದ್ದು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ಜೈಲಿನಲ್ಲಿ ಮನೆ ಊಟ ನೀಡಲು ನೀಡಿದ್ದ ಅನುಮತಿಗೆ ಹೈಕೋರ್ಟ್ ತಡೆ ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿ, ವಿಶೇಷ ಸವಲತ್ತು ನೀಡಲು ಅವಕಾಶವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ಜೈಲಿನಲ್ಲಿ ಮನೆ ಊಟ ನೀಡಲು 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಅನುಮತಿಗೆ ಹೈಕೋರ್ಟ್ ತಡೆ ನೀಡಿದೆ.Arayna Women's Cotton Printed Floral Straight Kurta with Palazzo Pants and Dupatta

ನ್ಯಾಯಾಂಗ ಬಂಧನದಲ್ಲಿದ್ದ ಈ ಮೂವರು ಆರೋಪಿಗಳು ವಾರಕ್ಕೊಮ್ಮೆ ಮನೆ ಊಟ ಪಡೆಯುತ್ತಿದ್ದರು. ಈ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ವೇಳೆ, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸುಪ್ರೀಂಕೋರ್ಟ್ ಸೂಚಿಸಿರುವುದನ್ನು ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಜೈಲಿನಲ್ಲಿ ಈಗಾಗಲೇ ಎಲ್ಲ ಕೈದಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.ಇದನ್ನು ಓದಿ:ಮುಂಬೈ ರಸ್ತೆ ಅಪಘಾತ: ಅಕ್ಷಯ್ ಕುಮಾರ್ ಭದ್ರತಾ ಕಾರು ಪಲ್ಟಿ, ಆಟೋ ಚಾಲಕ ಆಸ್ಪತ್ರೆಗೆ

ವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿ, ಮನೆ ಊಟಕ್ಕೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದೆ. ಇದರಿಂದ ಆರೋಪಿಗಳಿಗೆ ದೊರಕಿದ್ದ ವಿಶೇಷ ಸೌಲಭ್ಯ ಸಂಪೂರ್ಣವಾಗಿ ಕೈ ತಪ್ಪಿದೆ.