Skip to main content
ವಿಡಿಯೋ
general

ಜಿಬಿಎ ಚುನಾವಣೆ - ಉಸ್ತುವಾರಿಯಾಗಿ ರಾಮ್ ಮಾಧವ್‌ ನೇಮಿಸಿದ ಬಿಜೆಪಿ

By Shravanthi R
ಜಿಬಿಎ ಚುನಾವಣೆ - ಉಸ್ತುವಾರಿಯಾಗಿ ರಾಮ್ ಮಾಧವ್‌ ನೇಮಿಸಿದ ಬಿಜೆಪಿ

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಜೂನ್ 30ರೊಳಗಾಗಿ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿಯು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಜೂನ್ 30ರೊಳಗಾಗಿ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿಯು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಬಿಜೆಪಿ ನೇಮಕ ಮಾಡಿದೆ. ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಸಹುಸ್ತುವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಾಧ್ಯಾಯ್‌ ಅವರನ್ನು ನೇಮಕ ಮಾಡಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ. Cocoonkart Soft Silicone Case Cover Compatible with JBL Tune Beam 2 (Black)

ಮಂಗಳವಾರ(ಜ.20) ದಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರ ಅಧಿಕಾರ ಸ್ವೀಕಾರದ ಬೆನ್ನಲ್ಲೇ, ಚುನಾವಣಾ ಕಾರ್ಯಚಟುವಟಿಕೆಗಳನ್ನು ಆರಂಭಿಸಲಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಜಯ ಸಾಧಿಸಿದ ನಂತರ, ಕರ್ನಾಟಕದ ಸ್ಥಳೀಯ ಚುನಾವಣೆಗಳ ಕುರಿತಾಗಿ ಚರ್ಚೆಗಳು ತೀವ್ರಗೊಂಡಿದ್ದು, ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠರ ಹೇಳಿಕೆಗಳು ಗೊಂದಲ ಸೃಷ್ಟಿಯಾಗಿದ್ದವು ಎನ್ನುವ ಸುದ್ದಿಗಳು ಹರಿದಾಡಿದೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟಪಡಿಸಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಚುನಾವಣೆಯನ್ನು ಮೈತ್ರಿಯಾಗಿ ಎದುರಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ: ಮುಂದಿನ ವಾರದಿಂದ ಹೊಸ 'ಪೇ ಪಾರ್ಕಿಂಗ್' ಮತ್ತು 'ಟೋಯಿಂಗ್' ಶಿಕ್ಷೆ! ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!