ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕಳೆದ ಕೆಲವಾರಗಳಲ್ಲಿ ಸಾರ್ವಜನಿಕರಲ್ಲಿ ಕುತೂಹಲ ಮತ್ತು ಚರ್ಚೆ ಉಂಟುಮಾಡಿದೆ. ಟೀಸರ್ನನ್ನು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಕೋಟ್ಯಂತರ ಮಂದಿ ವೀಕ್ಷಿಸಿದ್ದಾರೆ. ಟೀಸರ್ನ ಗುಣಮಟ್ಟವನ್ನು ಬಹುಮಟ್ಟಿಗೆ ಮೆಚ್ಚಲಾಗಿದೆ. ಆದರೆ, ಕೆಲವು ಪ್ರೇಕ್ಷಕರು ಟೀಸರ್ನಲ್ಲಿ ಅನವಶ್ಯಕ ಅಶ್ಲೀಲ ದೃಶ್ಯಗಳಿವೆ ಎಂದು ಮೂಗು ಮುರಿಸಿಕೊಂಡಿದ್ದಾರೆ. ಇದನ್ನು ನೋಡಿದ ಕೆಲವರು ಮಕ್ಕಳ ಆಯೋಗ ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಬಿಎಫ್ಸಿಗೆ ಕೂಡ ‘ಟಾಕ್ಸಿಕ್’ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಲಾಗಿದೆ.American Tourister RUDY 21 Ltrs Small Size Polyester Causal Backpack with Security Zip
ಈ ಬಗ್ಗೆ ಸಿಬಿಎಫ್ಸಿ ಮುಖ್ಯಸ್ಥ ಪ್ರಸುನ್ ಜೋಶಿ ತಮ್ಮ ಅಭಿಪ್ರಾಯ ನೀಡಿದ್ದಾರೆ. ಅವರು, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಜನರು ನೋಡುವ ಅನೇಕ ವಿಷಯಗಳು ಸೆನ್ಸಾರ್ ಆಗಿರುವುದಿಲ್ಲ ಎಂದು ಹೇಳಿದ್ದಾರೆ. ಜನ ಅದನ್ನು ಸೆನ್ಸಾರ್ ಆಗಿದೆ ಎಂದು ತಪ್ಪಾಗಿ ಭಾವಿಸುತ್ತಾರೆ. ಅದರಿಂದ ಒಟಿಟಿ ಮತ್ತು ಯೂಟ್ಯೂಬ್ ಮೊದಲಾದ ಡಿಜಿಟಲ್ ವಿಷಯಗಳು ಸಹ ಸೆನ್ಸಾರ್ ಪ್ರಕ್ರಿಯೆಗೆ ಒಳಗಾಗಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.ಇದನ್ನು ಓದಿ:ಸ್ಟಾರ್ ಹೀರೋಗೆ ಕಪಾಳಮೋಕ್ಷ ಮಾಡಿದ್ರಾ ಪೂಜಾ ಹೆಗ್ಡೆ? ಇಲ್ಲಿದೆ ಸ್ಪಷ್ಟ ಮಾಹಿತಿ
‘ಟಾಕ್ಸಿಕ್’ ಚಿತ್ರದ ಬಗ್ಗೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಬಾರದು ಎಂಬುದರ ಕುರಿತು ಅವರು ಖಡಾ ನಿರ್ಣಯ ಹೇಳಲು ಈಗ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶಿಸಿದ್ದಾರೆ. ಯಶ್ ಹಾಗೂ ಕೆವಿಎನ್ ಒಟ್ಟಾಗಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ನಾಯಕಿ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗಲಿದೆ.