ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿಆರ್ಪಿಎಫ್ ಯೋಧ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ನಡೆದಿದ್ದೇನು?ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಶಾರದಾ ಮಾತಾ ದೇವಾಲಯದ ಸಮೀಪವಿರುವ ಖೈರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಉಧಂಪುರ ಕಡೆಗೆ ಅತಿ ವೇಗವಾಗಿ ಚಲಿಸುತ್ತಿದ್ದ ಬಸ್, ರಸ್ತೆಯಲ್ಲಿದ್ದ ಮೋಟಾರ್ ಸೈಕಲ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೋಟಾರ್ ಸೈಕಲ್ ಸವಾರ ಮತ್ತು ಹಿಂಬದಿ