Skip to main content
ವಿಡಿಯೋ
general

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆಯ ನಿರೀಕ್ಷೆ ಇದೆ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

By Shravanthi R
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆಯ ನಿರೀಕ್ಷೆ ಇದೆ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಇನ್ನೂ ಹೆಚ್ಚಿನ ಕೊಡುಗೆಯ ನಿರೀಕ್ಷೆಯಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಿದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರು ತಿಳಿಸಿದ್ದಾರೆ.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕಕೆ ಇನ್ನೂ ಹೆಚ್ಚಿನ ಕೊಡುಗೆಯ ನಿರೀಕ್ಷೆಯಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಿದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರು ತಿಳಿಸಿದ್ದಾರೆ. ಕರ್ನಾಟಕ ಒಳಗೊಂಡಂತೆ ಎಲ್ಲಾ ರಾಜ್ಯಗಳಿಗೆ ನ್ಯಾಯಸಮ್ಮತ ಕೊಡುಗೆಗೆ ಒತ್ತು ನೀಡುತ್ತಿದೆ ಎಂದಿದ್ದಾರೆ. 

ರಾಜ್ಯಕ್ಕೆ ಮೋದಿ ಸರ್ಕಾರದ್ದೇ ಹೆಚ್ಚಿನ ಕೊಡುಗೆಯಿದ್ದು, ರೈಲ್ವೇ ಯೋಜನೆಗಳನ್ನು ಕೊಡಮಾಡಿದೆ. ಹಿಂದೆಲ್ಲಾ 700-800 ಕೊಡುತ್ತಿದ್ದರು. ನಾವಿಂದು 8000 ಕೋಟಿ ಕೊಡುತ್ತಿದ್ದೇವೆ. ರಾಜ್ಯಕ್ಕೆ ಇದು ಬಂಪರ್‌ ಅಲ್ಲವೇ? ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಬದ್ದವಾಗಿದೆ ಎಂದಿದ್ದಾರೆ. ಈ ವಿಚಾರವಾಗಿ ರಾಜಕೀಯ ಮಾಡಲು ಹೋಗುವುದಿಲ್ಲ. Sonos Era 100 | Smart Speaker with WiFi, Bluetooth, Amazon Alexa - Black

ದೇಶದಲ್ಲಿ 60 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡದ ಅಭಿವೃದ್ದಿ ಕಾರ್ಯಗಳನ್ನು ಎನ್‌ಡಿಎ ಸರ್ಕಾರವು ಐದೇ ವರ್ಷಗಳಲ್ಲಿ ಮಾಡಿದೆ. ದೇಶಾದ್ಯಂತ ವಿವಿಧ ವಲಯಗಳಲ್ಲಿ ಉತ್ತೇಜನ ನೀಡುವಲ್ಲಿ ದೃಷ್ಟಿ ಹರಿಸಿದೆ ಎಂದು ಮಂಗಳವಾರ(ಜ.27) ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಜಿಬಿಎ ಎಲೆಕ್ಷನ್ - ಮತಪಟ್ಟಿ ತಾಳೆಗೆ ಹೆಚ್ಚಿನ ಸಮಯ ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ