ರಾಜ್ಯದಲ್ಲಿನ ಎಲ್ಲ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ, ಮುಂದಿನ ಚುನಾವಣೆಗೆ ಸಕಲ ಸಿದ್ದತೆ ನಡೆಸಲಾಗಿದೆ. ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ 2026-31 ನೇ ಸಾಲಿನ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವ ಕುರಿತು ನಿರ್ದೇಶಿಸಿದೆ.
ರಾಜ್ಯದ 6000ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಚುನಾವಣಾ ಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚಿಸಿ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ಇದರ ಭಾಗವಾಗಿ ಜಿಲ್ಲಾಧಿಕಾರಿಗಳು ಪೂರ್ವಸಿದ್ದತೆಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿಯನ್ನು ಮಾಡಿ ರಾಜ್ಯ ಸರ್ಕಾರಕ್ಕೆ ಹಾಗೂ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿದೆ. Amazon Basics Pro Series Wireless Noise Cancelling ANC Over Ear Headphone | Bluetooth Headset | USB Charging | 10 m Paring Distance | 74 Hours Battery Life | 40 mm Drivers | IPX4 Rated (Silver)
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಅಡಿಯಲ್ಲಿ, ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಅಗತ್ಯ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುವಂತೆ ತಿಳಿಸಿದೆ. ಈ ಮೂಲಕ ಮತದಾರರ ಅವಶ್ಯಕತೆಗಳ ಅನುಗುಣವಾಗಿ (ಮೀಸಲಾತಿ ಪಟ್ಟಿ, ಮತದಾರರ ಪ್ರತಿ) ನಿಗದಿತ ಕಾಲಮಿತಿಯೊಳಗೆ ಚುನಾವಣಾ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಿಳಿಸಲಾಗಿದೆ.
ಚುನಾವಣಾ ದಿಕ್ಸೂಚಿ -
ವಿಧಾನ ಸಭೆ ಚುನಾವಣೆಗೆ 2 ವರೆ ವರ್ಷ ಬಾಕಿಯಿರುವ ಸಂದರ್ಭದಲ್ಲಿ, ಮುಂದಿನ ಸ್ಥಳೀಯ ಸೇರಿದಂತೆ ಏಕಕಾಲಕ್ಕೆ ನಡೆಯಲಿರುವ ಎಲ್ಲಾ ಚುನಾವಣೆಗಳು ರಾಜ್ಯ ರಾಜಕೀಯಕ್ಕೆ ದಿಕ್ಸೂಚಿಯಗಲಿದೆ. ಮೊದಲ ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ 2026-31 ನೇ ಸಾಲಿಗೆ ಸಿದ್ದತೆ ಮತ್ತದರ ಫಲಿತಾಂಶ ಮುಂದಿನ ದಿನಗಳಲ್ಲಿ ಆಡಳಿತ ಪಕ್ಷಕ್ಕೆ ಕಾರ್ಯಸೂಚಿಯಾಗಲಿದೆ. ಈ ಮೂಲಕ ಚುನಾವಣೆ ದಿನಾಂಕ ಪ್ರಕಟವೂ ಇನ್ನೇನು ಹೊರಬೀಳಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಒದಿ: 37,000 ಕೋಟಿ ರೂ. ಬಾಕಿ: ಅಭಿವೃದ್ಧಿ ಶೂನ್ಯ, ಆಡಳಿತ ದಿವಾಳಿ - ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ಆಕ್ರೋಶ!