Skip to main content
ವಿಡಿಯೋ
1/2
politics

ಹಾವೇರಿಯಲ್ಲಿ ಫೆಬ್ರವರಿ 13ಕ್ಕೆ ಹಕ್ಕುಪತ್ರಗಳ ಹಬ್ಬ: ಸಿಎಂ ಸಿದ್ದರಾಮಯ್ಯರಿಂದ ಹೈಟೆಕ್ ಗಿಫ್ಟ್..!

By Sushmitha R
ಹಾವೇರಿಯಲ್ಲಿ ಫೆಬ್ರವರಿ 13ಕ್ಕೆ ಹಕ್ಕುಪತ್ರಗಳ ಹಬ್ಬ: ಸಿಎಂ ಸಿದ್ದರಾಮಯ್ಯರಿಂದ ಹೈಟೆಕ್ ಗಿಫ್ಟ್..!

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳು ಪೂರ್ಣಗೊಳ್ಳುತ್ತಿರುವ ಸಂಭ್ರಮದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಾಮಾನ್ಯರಿಗೆ ದೊಡ್ಡ ಕೊಡುಗೆ ನೀಡಲು ಮುಂದಾಗಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳು ಪೂರ್ಣಗೊಳ್ಳುತ್ತಿರುವ ಸಂಭ್ರಮದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಾಮಾನ್ಯರಿಗೆ ದೊಡ್ಡ ಕೊಡುಗೆ ನೀಡಲು ಮುಂದಾಗಿದ್ದಾರೆ.

ಫೆಬ್ರವರಿ 13ರಂದು ಹಾವೇರಿಯಲ್ಲಿ ಆಯೋಜಿಸಲಾದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಮನೆ ಮಾಲೀಕತ್ವದ ಹಕ್ಕುಪತ್ರಗಳನ್ನು ವಿತರಿಸಲಾಗುವುದು.Shining Diva Fashion Latest Stylish Bohemian Stackable Multilayer Crystal Charm Beaded Bracelet for Women Girls

ಈ ಮಹತ್ವಾಕಾಂಕ್ಷಿ ಯೋಜನೆಗೆ 2015ರಲ್ಲಿ ರಾಹುಲ್ ಗಾಂಧಿಯವರು ನೀಡಿದ್ದ ಭರವಸೆಯೇ ಮೂಲ ಪ್ರೇರಣೆ. ಕಳೆದ ವರ್ಷ ಮೇ ತಿಂಗಳಲ್ಲಿ ಹೊಸಪೇಟೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿತ್ತು, ಅಂದು 1,11,111 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿತ್ತು. ಈಗ ಇದರ ಮುಂದಿನ ಹಂತವಾಗಿ ಹಾವೇರಿಯಲ್ಲಿ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಅಭಿಯಾನದ ನೇತೃತ್ವ ವಹಿಸಿದ್ದಾರೆ.ಮಹಾತ್ಮ ಗಾಂಧಿ ಪುಣ್ಯಸ್ಮರಣೆ - ಹುತಾತ್ಮರ ದಿನ - ಗಣ್ಯರಿಂದ ರಾಷ್ಟ್ರ ಗೌರವದ ನಮನ

ವಿಶೇಷತೆಗಳು:

ಅರ್ಜಿ ಸಲ್ಲಿಸುವ ಅಗತ್ಯವಿಲ್ಲ: ಈ ಯೋಜನೆಯಲ್ಲಿ ಜನರು ಕಚೇರಿಗಳಿಗೆ ಅಲೆಯುವಂತಿಲ್ಲ. ಅಧಿಕಾರಿಗಳೇ ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಹಕ್ಕುಪತ್ರ ನೀಡಲಿದ್ದಾರೆ.

ಡಿಜಿಟಲ್ ಸುರಕ್ಷತೆ: ಸರ್ಕಾರ ನೀಡುತ್ತಿರುವ ಈ ಹಕ್ಕುಪತ್ರಗಳು ಡಿಜಿಟಲ್ ರೂಪದಲ್ಲಿರುತ್ತವೆ. ಇದರಿಂದ ದಾಖಲೆಗಳು ಕಳೆದುಹೋಗುವ ಅಥವಾ ಹಾನಿಯಾಗುವ ಭೀತಿ ಇರುವುದಿಲ್ಲ.

ನಾಲ್ಕು ಲಕ್ಷ ಜನರಿಗೆ ಲಾಭ: ಈ ಅಭಿಯಾನದಿಂದ ಸುಮಾರು ನಾಲ್ಕು ಲಕ್ಷ ಜನರು ತಮ್ಮ ಸ್ವಂತ ಮನೆಯ ಕಾನೂನುಬದ್ಧ ಮಾಲೀಕರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಕಂದಾಯ ಇಲಾಖೆಯ ಮಾಹಿತಿಯಂತೆ, ಹಿಂದಿನ ಬಿಜೆಪಿ ಸರ್ಕಾರದ ಆರು ವರ್ಷಗಳ ಅವಧಿಯಲ್ಲಿ ಕೇವಲ 1.08 ಲಕ್ಷ ಹಕ್ಕುಪತ್ರಗಳನ್ನು ವಿತರಿಸಲಾಗಿತ್ತು. ಆದರೆ, ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಎರಡೂವರೆ ವರ್ಷಗಳಲ್ಲಿ ಬೃಹತ್ ಸಂಖ್ಯೆಯ ಹಕ್ಕುಪತ್ರ ವಿತರಣೆಯನ್ನು ಗುರಿಯಾಗಿಸಿಕೊಂಡಿದೆ.ಇದನ್ನು ಓದಿ: ಗ್ರಾಮ ಪಂಚಾಯಿತಿ ಚುನಾವಣೆಗೆ ವೇಗ - ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ದತಾ ವರದಿ ಸಲ್ಲಿಸಲು ಸೂಚನೆ

ಕಂದಾಯ ಸಚಿವರು ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಉಪ ವಿಭಾಗಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ, ಮುಂದಿನ ಒಂದು ವಾರದೊಳಗೆ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೇರವಾಗಿ ಹಕ್ಕುಪತ್ರ ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.ಇದನ್ನು ಓದಿ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆ - ಇವಿಎಂ ಬಳಕೆಗೆ ಎಸ್‌ಇಸಿಗೆ ನಾಗರೀಕ ಗುಂಪುಗಳ ಆಗ್ರಹ!?