ಭಾರತದ ಆರ್ಥಿಕ ಇತಿಹಾಸದಲ್ಲಿ ಇಂದು ಒಂದು ವಿಶೇಷ ದಿನ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
ಸಾಮಾನ್ಯವಾಗಿ ವಾರದ ದಿನಗಳಲ್ಲಿ ಮಂಡನೆಯಾಗುತ್ತಿದ್ದ ಬಜೆಟ್, ಈ ಬಾರಿ ಫೆಬ್ರವರಿ 1 ಭಾನುವಾರ ಬಂದಿದ್ದರೂ ಸಹ ಸಂಪ್ರದಾಯದಂತೆ ಅದೇ ದಿನ ಮಂಡನೆಯಾಗುತ್ತಿರುವುದು ವಿಶೇಷ. ನಿರ್ಮಲಾ ಸೀತಾರಾಮನ್ ಅವರಿಗೆ ಇದು ಸತತ 8ನೇ ಬಜೆಟ್ ಮಂಡನೆಯಾಗಿದ್ದು, ಈ ಮೂಲಕ ಅವರು ಭಾರತದ ಆರ್ಥಿಕ ಇತಿಹಾಸದಲ್ಲಿ ಹೊಸ ದಾಖಲೆ ಬರೆಯುತ್ತಿದ್ದಾರೆ.Premium Gold Plated Meenakari Finger Ring with Artistic Detailing
ಬಜೆಟ್‌ನ ಪ್ರಮುಖ ನಿರೀಕ್ಷೆಗಳು:
ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಅಥವಾ ಸ್ಟ್ಯಾಂಡರ್ಡ್ ಡಿಡಕ್ಷನ್ ಹೆಚ್ಚಳದ ಮೂಲಕ ಸಂಬಳ ಪಡೆಯುವ ವರ್ಗಕ್ಕೆ ರಿಲೀಫ್ ನೀಡುವ ನಿರೀಕ್ಷೆಯಿದೆ.
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ: ರೈತರ ಆದಾಯ ಹೆಚ್ಚಿಸಲು ಹೊಸ ತಂತ್ರಜ್ಞಾನ ಮತ್ತು ಬೆಂಬಲ ಬೆಲೆಗೆ ಸಂಬಂಧಿಸಿದ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ.
ಮೂಲಸೌಕರ್ಯ ಅಭಿವೃದ್ಧಿ: ರೈಲ್ವೆ, ಹೆದ್ದಾರಿ ಮತ್ತು ಡಿಜಿಟಲ್ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆಯಿದೆ.ಇದನ್ನು ಓದಿ: ಕೇಂದ್ರ ಬಜೆಟ್ 2026 - ರಾಷ್ಟ್ರಪತಿಯನ್ನು ಭೇಟಿ ಮಾಡಿದ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್
ಉದ್ಯೋಗ ಸೃಷ್ಟಿ: ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ಮತ್ತು ಉತ್ಪಾದನಾ ವಲಯದಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ಒತ್ತು ನೀಡಬಹುದು.
ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ಭೀತಿ ಇದ್ದರೂ, ಭಾರತವು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮುತ್ತಿದೆ. ಇಂದಿನ ಬಜೆಟ್ ಸಾಮಾನ್ಯ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜೊತೆಗೆ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.ಇದನ್ನು ಓದಿ:ಅಂತರಾಷ್ಟ್ರೀಯ ಗಾಳಿಪಟ ಉತ್ಸವ 2026 - ಹುಬ್ಬಳ್ಳಿಯ ಆಕಾಶದಲ್ಲಿ ಗಾಳಿಪಟ ಸಂಭ್ರಮ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ