ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯಕ್ರಮಗಳು ಆರಂಭವಾಗಿವೆ ಎಂಬ ಸುದ್ದಿ ಸಿನಿರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಫೆಬ್ರವರಿ 25ರಂದು ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮಗಳನ್ನು ಸರಳವಾಗಿ ಆದರೆ ಸಂಭ್ರಮದಿಂದ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಇವರ ಮದುವೆ ನಡೆಯಲಿದೆ ಎಂದು ವರದಿಗಳು ಹೇಳುತ್ತಿವೆ. ಈ ಸಮಾರಂಭಕ್ಕೆ ಕೇವಲ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.Arayna Women's Cotton Printed Floral Straight Kurta with Palazzo Pants and Dupatta
ವಿಶೇಷವಾಗಿ, ಇಬ್ಬರೂ ಕುಟುಂಬಗಳ ಸಂಪ್ರದಾಯವನ್ನು ಗೌರವಿಸುವ ಉದ್ದೇಶದಿಂದ ಎರಡು ರೀತಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ವಿಜಯ್ ದೇವರಕೊಂಡ ಅವರ ತೆಲುಗು ಸಂಪ್ರದಾಯದಂತೆ ಮದುವೆ ವಿಧಿಗಳು ನಡೆಯಲಿದ್ದು, ಸಂಜೆ ವೇಳೆಗೆ ರಶ್ಮಿಕಾ ಮಂದಣ್ಣ ಅವರ ಕೊಡವ ಸಂಪ್ರದಾಯದಂತೆ ಮತ್ತೊಂದು ಮದುವೆ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಇದೆ.
ಮದುವೆಗೂ ಮುನ್ನ ಕುಟುಂಬದವರು ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕೆಲವು ಆಪ್ತ ಚಿತ್ರರಂಗದ ಗಣ್ಯರು ಉದಯಪುರಕ್ಕೆ ಆಗಮಿಸಿರುವುದಾಗಿ ವರದಿಯಾಗಿದೆ. ಅತಿಥಿಗಳ ಸಂಖ್ಯೆ ಸುಮಾರು 100ರೊಳಗೆ ಮಾತ್ರ ಇರಲಿದೆ ಎನ್ನಲಾಗಿದೆ. ಮದುವೆಯ ನಂತರ ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಈ ಭರ್ಜರಿ ಮದುವೆ ಬಗ್ಗೆ ಅಭಿಮಾನಿಗಳಲ್ಲಿ ಹೆಚ್ಚಿನ ಕುತೂಹಲ ಮೂಡಿದೆ.