ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅದನ್ನು ರದ್ದುಪಡಿಸಲು ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರು ದೂರು ನೀಡಿಲ್ಲದಿದ್ದರೂ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಸೋಮವಾರ ವಿಚಾರಣೆ ನಡೆಯಲಿದೆ.Arayna Women's Cotton Printed Floral Straight Kurt