ಬೆಂಗಳೂರು: ಐಪಿಎಲ್ ಟೂರ್ನಿಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ತವರು ಮೈದಾನವಾದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್‌ನಲ್ಲಿ ಐದು ಪಂದ್ಯಗಳನ್ನು ಆಡಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವೂ ಕೆಲವು ಮುಖ್ಯ ಷರತ್ತುಗಳೊಂದಿಗೆ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಈ ಮೂಲಕ ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುತ್ತವೆಯೇ ಇಲ್ಲವೇ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ. Arayna Women's Cotton Printed Floral Straight Kurta with Palazzo Pants and Dupatta
ರಾಜ್ಯ ಸರ್ಕಾರ ಮಾರ್ಚ್ 4ರಂದು ಹೊರಡಿಸಿದ ಆದೇಶದಂತೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ಸೇರಿದಂತೆ ಪಂದ್ಯಗಳನ್ನು ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಗೆ ತಾತ್ಕಾಲಿಕ ಅನುಮತಿ ನೀಡಲಾಗಿದೆ. ಆದರೆ ತಜ್ಞರ ಸಮಿತಿ ನೀಡಿರುವ ಸುರಕ್ಷತಾ ಶಿಫಾರಸುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ.
ಸರ್ಕಾರ ವಿಧಿಸಿರುವ ಷರತ್ತುಗಳ ಪ್ರಕಾರ, KSCA ನಿಯಮಿತವಾಗಿ ಪ್ರಗತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಕ್ರೀಡಾಂಗಣದಲ್ಲಿ ಕೈಗೊಳ್ಳಲಾದ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುತ್ತದೆ. ಜನಸಂದಣಿ ನಿಯಂತ್ರಣಕ್ಕಾಗಿ ಕ್ರೀಡಾಂಗಣದ ಸಾಮರ್ಥ್ಯವನ್ನು ನಿಗದಿಪಡಿಸಿದಂತೆ ಕಾಯ್ದಿರಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಸೂಚನೆ ನೀಡಬಹುದು. ಯಾವುದೇ ನಿಯಮ ಉಲ್ಲಂಘನೆಯಾದರೆ ಅನುಮತಿಯನ್ನು ಹಿಂಪಡೆಯುವ ಸಾಧ್ಯತೆ ಇದೆ ಎಂದು ಸರ್ಕಾರ ಎಚ್ಚರಿಸಿದೆ. ಬೆಂಗಳೂರು ಮೆಟ್ರೋದಲ್ಲಿ ಯುವಕನೊಬ್ಬನ ಸೊಂಟದಲ್ಲಿ ಗನ್ ..ಪ್ರಯಾಣಿಕರ ಆಕ್ರೋಶ..!ಇಲ್ಲಿದೆ ಮಾಹಿತಿ
ಇದಲ್ಲದೆ, ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಧ್ಯಮ ಮತ್ತು ದೀರ್ಘಾವಧಿಯ ಅಭಿವೃದ್ಧಿ ಕಾಮಗಾರಿಗಳ ಮೇಲೂ ಸರ್ಕಾರ ನಿಗಾ ಇಡಲಿದೆ. ವಿಶೇಷವಾಗಿ ಪ್ರವೇಶ ದ್ವಾರಗಳ ಅಗಲವನ್ನು ಹೆಚ್ಚಿಸುವಂತೆ ತಜ್ಞರ ಸಮಿತಿ ಶಿಫಾರಸು ಮಾಡಿತ್ತು. ಸಮಿತಿ 6 ಮೀಟರ್ ಅಗಲಕ್ಕೆ ವಿಸ್ತರಿಸಲು ಸಲಹೆ ನೀಡಿದ್ದರೂ, KSCA ದ್ವಾರಗಳನ್ನು 9 ಮೀಟರ್‌ಗೆ ವಿಸ್ತರಿಸಿದೆ. ಇದರಿಂದ ಪಂದ್ಯ ದಿನಗಳಲ್ಲಿ ನೂಕುನುಗ್ಗಲು ಮತ್ತು ಜನಸಂದಣಿ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆಯಿದೆ.
ಹಿಂದೆ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಸರ್ಕಾರ ನ್ಯಾಯಮೂರ್ತಿ ಕುನ್ಹಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಆ ಸಮಿತಿ ನೀಡಿದ ಸುರಕ್ಷತಾ ಸಲಹೆಗಳನ್ನು ಅನುಸರಿಸುವಂತೆ ಸರ್ಕಾರ ಈಗ ಸ್ಪಷ್ಟವಾಗಿ ಸೂಚಿಸಿದೆ. ಈ ಕ್ರಮಗಳಿಂದ IPL ಪಂದ್ಯಗಳು ಸುರಕ್ಷಿತವಾಗಿ ನಡೆಯುವ ನಿರೀಕ್ಷೆ ವ್ಯಕ್ತವಾಗಿದೆ.