Skip to main content
ವಿಡಿಯೋ
crime

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಬಯಲು: 35,060 ಕೆಜಿ ಅಕ್ಕಿ ಜಪ್ತಿ..! ಇಲ್ಲಿದೆ ಮಾಹಿತಿ

By Ram Chethan
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಬಯಲು: 35,060 ಕೆಜಿ ಅಕ್ಕಿ ಜಪ್ತಿ..! ಇಲ್ಲಿದೆ ಮಾಹಿತಿ

ವಿಜಯಪುರ ನಗರದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿವೆ. ಆರ್‌ಎನ್‌ಎಸ್ ಶೋ ರೂಮ್ ಬಳಿ ತಡೆದ ಲಾರಿಯಲ್ಲಿ ಸುಮಾರು 35,060 ಕೆಜಿ ಅಕ್ಕಿ ಪತ್ತೆಯಾಗಿದ್ದು, ಚಿತ್ರದುರ್ಗದಿಂದ ಸೊಲ್ಲಾಪುರ ಕಡೆಗೆ ಸಾಗಿಸಲಾಗುತ್ತಿತ್ತು. ಪ್ರಕರಣ ಜಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ವಿಜಯಪುರ ನಗರದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ನಗರದ ಆರ್‌ಎನ್‌ಎಸ್ ಶೋ ರೂಮ್ ಸಮೀಪ ಸಂಶಯಾಸ್ಪದವಾಗಿ ಸಾಗುತ್ತಿದ್ದ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.Arayna Women's Cotton Printed Floral Straight Kurta with Palazzo Pants and Dupatta

ಪರಿಶೀಲನೆಯ ವೇಳೆ ಲಾರಿಯಲ್ಲಿ ಒಟ್ಟು ಸುಮಾರು 35,060 ಕೆಜಿ ಅಕ್ಕಿ ಇರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ತಕ್ಷಣವೇ ಅಕ್ಕಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಅಕ್ಕಿಯನ್ನು ಚಿತ್ರದುರ್ಗದಿಂದ ಮಹಾರಾಷ್ಟ್ರದ ಸೊಲ್ಲಾಪುರ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ದೊರೆತಿದೆ.

ಈ ಕಾರ್ಯಾಚರಣೆಯನ್ನು ವಿಜಯಪುರ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ, ಆಹಾರ ನಿರೀಕ್ಷಕ ವಿಜಯಕುಮಾರ್ ಗುಮಶೆಟ್ಟಿ ಮತ್ತು ಪಿಎಸ್ಐ ಮಹೇಶ್ ಸಂಖ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.ಸಿಎಂ ಸಿದ್ದರಾಮಯ್ಯರಿಂದ 17ನೇ ಬಜೆಟ್ ಮಂಡನೆ: ಮತ್ತೊಂದು ಐತಿಹಾಸಿಕ ದಾಖಲೆ ಸಮೀಪ..!ಇಲ್ಲಿದೆ ಮಾಹಿತಿ

ಈ ಘಟನೆಗೆ ಸಂಬಂಧಿಸಿದಂತೆ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.