ರಾಜ್ಯದ ರೈತರಿಗೆ ಹೆಚ್ಚು ಸಹಾಯವಾಗುವಂತೆ ಕೃಷಿ ಹಾಗೂ ಹೈನುಗಾರಿಕೆ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ರೈತರಿಗೆ ಹವಾಮಾನ ಮಾಹಿತಿ, ಮಾರುಕಟ್ಟೆ ದರ, ಕೃಷಿ ತಾಂತ್ರಿಕ ಸಲಹೆ ಮತ್ತು ಇಲಾಖೆಯ ಮಾಹಿತಿ ಒಂದೇ ಸ್ಥಳದಲ್ಲಿ ದೊರಕುವಂತೆ ಕೃಷಿ ಇಲಾಖೆಯ ‘ರೈತ ಕರೆ ಕೇಂದ್ರ’ಗಳನ್ನು ಎಐ ತಂತ್ರಜ್ಞಾನದ ಸಹಾಯದಿಂದ ಉನ್ನತೀಕರಿಸಲು ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ಅಗತ್ಯ ಮಾಹಿತಿಯನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ.Titan Evoke 2.0, 1.32" AMOLED Display Smart Watch with AOD,1000 Nits, Functional Crown, Magnetic Strap, Metal Body,Fast Charge,24/7 Health Suite, BT Calling, SpO2, HRM, IP68 Smartwatch - Glacier Blue
ಚಿತ್ರದುರ್ಗ ಜಿಲ್ಲೆಯ ಬಬ್ಬೂರು ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ‘ಕೃಷಿ ಉದ್ದಿಮೆ ತರಬೇತಿ ಕೇಂದ್ರ’ವಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇಲ್ಲಿ ರೈತರಿಗೆ ಕೃಷಿ ಉದ್ಯಮದ ಬಗ್ಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಜೊತೆಗೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಕೃಷಿ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲು ಸರ್ಕಾರ ನಿರ್ಧರಿಸಿದೆ.
ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸ್ಥಳದಲ್ಲಿ ದೊರಕುವಂತೆ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ MSIL ವತಿಯಿಂದ ‘ರೈತ ಮಾಲ್’ಗಳನ್ನು ಸ್ಥಾಪಿಸುವ ಯೋಜನೆ ಕೂಡ ಘೋಷಿಸಲಾಗಿದೆ. ಇದರಿಂದ ರೈತರಿಗೆ ಬೇಕಾದ ಸಾಮಗ್ರಿಗಳನ್ನು ಸುಲಭವಾಗಿ ಖರೀದಿಸಲು ಅವಕಾಶ ಸಿಗಲಿದೆ.
ಹೈನುಗಾರಿಕೆ:
ಇದರ ಜೊತೆಗೆ ಹೈನುಗಾರಿಕೆ ವಲಯದ ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಿದೆ. 2026–27ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಹಾಗೆಯೇ ರೂ.10 ಕೋಟಿ ವೆಚ್ಚದಲ್ಲಿ 15 ತಾಲೂಕು ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗೆ ಏರಿಸಲಾಗುತ್ತದೆ.ರಾಜ್ಯದ ಆರ್ಥಿಕತೆ ವೇಗವಾಗಿ ಬೆಳವಣಿಗೆ..ರಾಷ್ಟ್ರೀಯ ಸರಾಸರಿಗಿಂತ ಕರ್ನಾಟಕ ಮುನ್ನಡೆ..!ಬಜೆಟ್‌ನಲ್ಲಿ CM ಘೋಷಣೆ
ಸ್ಥಳೀಯ ಮೇಕೆ ತಳಿಗಳ ಅಭಿವೃದ್ಧಿಗಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ಕಡಿಮೆ ಮಾಡಲು ‘ವರ್ಷಕ್ಕೊಂದು ಕರು’ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ‘ಫಲಧಾರೆ’ ಶಿಬಿರಗಳನ್ನು ಆರಂಭಿಸುವ ಯೋಜನೆ ಕೂಡ ಘೋಷಿಸಲಾಗಿದೆ.
ಈ ಯೋಜನೆಗಳು ಜಾರಿಯಾದರೆ ರೈತರು, ಹೈನುಗಾರಿಕೆ ನಡೆಸುವವರು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಸರ್ಕಾರ ತಿಳಿಸಿದೆ.