Skip to main content
ವಿಡಿಯೋ
politics

8 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ..! ಬಜೆಟ್‌ನಲ್ಲಿ ಸಿಎಂ ಭರ್ಜರಿ ಘೋಷಣೆ

By Ram Chethan
8 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ..! ಬಜೆಟ್‌ನಲ್ಲಿ ಸಿಎಂ ಭರ್ಜರಿ ಘೋಷಣೆ

ಕರ್ನಾಟಕ ಬಜೆಟ್ 2026–27ರಲ್ಲಿ ಸಹಕಾರಿ ವಲಯದ ಅಭಿವೃದ್ಧಿಗೆ ಮಹತ್ವದ ಕ್ರಮಗಳನ್ನು ಘೋಷಿಸಲಾಗಿದೆ. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ. ಜೊತೆಗೆ ಎಪಿಎಂಸಿ ಮಾರುಕಟ್ಟೆಗಳ ಡಿಜಿಟಲೀಕರಣ, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ.

ಕರ್ನಾಟಕ ಸರ್ಕಾರದ 2026–27ನೇ ಸಾಲಿನ ಬಜೆಟ್ “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಧ್ಯೇಯವಾಕ್ಯದೊಂದಿಗೆ ಪ್ರಕಟವಾಗಿದ್ದು, ಸಹಕಾರಿ ವಲಯದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಈ ಸಾಲಿನಲ್ಲಿ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ರೈತರಿಗೆ ಕೃಷಿ ಚಟುವಟಿಕೆಗಳನ್ನು ಸುಲಭವಾಗಿ ಮುಂದುವರಿಸಲು ನೆರವಾಗಲಿದೆ.Titan Evoke 2.0, 1.32" AMOLED Display Smart Watch with AOD,1000 Nits, Functional Crown, Magnetic Strap, Metal Body,Fast Charge,24/7 Health Suite, BT Calling, SpO2, HRM, IP68 Smartwatch - Glacier Blue

ಸಹಕಾರಿ ಕ್ಷೇತ್ರದ ಸೇವೆಗಳು ಜನರಿಗೆ ಇನ್ನಷ್ಟು ಸುಲಭವಾಗಿ ದೊರಕುವಂತೆ ಮಾಡಲು ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ಇರುವ ವಿವಿಧ ಸೇವೆಗಳು ಮತ್ತು ಕಾಯ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಆನ್‌ಲೈನ್ ದತ್ತಾಂಶ ವ್ಯವಸ್ಥೆಯಲ್ಲಿ ನಿರ್ವಹಿಸುವ ಕ್ರಮ ಕೈಗೊಳ್ಳಲಾಗುತ್ತದೆ. ಇದರ ಮೂಲಕ ಜನರು ಹಾಗೂ ಸಹಕಾರಿ ಸಂಘಗಳು ತಮ್ಮ ಅಗತ್ಯ ದಾಖಲೆಗಳು ಮತ್ತು ಸೇವೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ.

ಇದಕ್ಕೂ ಜೊತೆಗೆ ರಾಜ್ಯದ ವಾಣಿಜ್ಯ ಚಟುವಟಿಕೆಗಳನ್ನು ಉತ್ತೇಜಿಸಲು ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಪ್ರದೇಶಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದ ಮೂಲಕ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ವ್ಯಾಪಾರಿಗಳಿಗೆ ಉತ್ತಮ ಮೂಲಸೌಕರ್ಯ ಸಿಗುವ ಜೊತೆಗೆ ಸ್ಥಳೀಯ ಉದ್ಯೋಗ ಅವಕಾಶಗಳೂ ಹೆಚ್ಚಾಗುವ ನಿರೀಕ್ಷೆಯಿದೆ.ಇದನ್ನು ಓದಿ:ರೈತರು ಮತ್ತು ಹೈನುಗಾರಿಕೆಗೆ ಬಜೆಟ್‌ನಲ್ಲಿ ಸಿಎಂ ಭರ್ಜರಿ ಘೋಷಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯವಿಧಾನವನ್ನು ಆಧುನೀಕರಿಸಲು ಸರ್ಕಾರ 10 ಕೋಟಿ ರೂಪಾಯಿ ವೆಚ್ಚದಲ್ಲಿ ERP (ಎಂಟರ್‌ಪ್ರೈಸ್ ರಿಸೋರ್ಸ್ ಪ್ಲಾನಿಂಗ್) ವ್ಯವಸ್ಥೆ ಜಾರಿಗೆ ತರುವ ಯೋಜನೆ ಘೋಷಿಸಿದೆ. ಈ ವ್ಯವಸ್ಥೆಯ ಮೂಲಕ ಮಾರುಕಟ್ಟೆ ಚಟುವಟಿಕೆಗಳು ಸಂಪೂರ್ಣ ಡಿಜಿಟಲ್ ಆಗಿ ಕಾರ್ಯನಿರ್ವಹಿಸಲಿದ್ದು, ರೈತರು ಮತ್ತು ವ್ಯಾಪಾರಿಗಳಿಗೆ ಪಾರದರ್ಶಕ ಹಾಗೂ ವೇಗವಾದ ಸೇವೆ ದೊರಕುವಂತಾಗಲಿದೆ.