ಬೆಂಗಳೂರು, ಮಾರ್ಚ್ 06: ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲೂ ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ “ಶಾಂತವೇರಿ ಗೋಪಾಲಗೌಡ ಆಸ್ಪತ್ರೆ” ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಮಾಜಪರ ಹೋರಾಟಗಾರರಾಗಿದ್ದ ಶಾಂತವೇರಿ ಗೋಪಾಲಗೌಡ ಅವರ ಸ್ಮರಣಾರ್ಥ ಈ ಹೆಸರು ಇಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.Titan Evoke 2.0, 1.32" AMOLED Display Smart Watch with AOD,1000 Nits, Functional Crown, Magnetic Strap, Metal Body,Fast Charge,24/7 Health Suite, BT Calling, SpO2, HRM, IP68 Smartwatch - Glacier Blue
ಬೆಂಗಳೂರಿನ ಹೃದಯಭಾಗದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾಗಿದೆ. ಸುಮಾರು 125 ವರ್ಷಗಳ ಇತಿಹಾಸ ಹೊಂದಿರುವ ಈ ಆಸ್ಪತ್ರೆ ಸಾವಿರಾರು ಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ. 1897ರಲ್ಲಿ ರಾಣಿ ವಿಕ್ಟೋರಿಯಾ ಅವರ ಸ್ಮರಣಾರ್ಥ ಈ ಆಸ್ಪತ್ರೆಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ 1900ರಲ್ಲಿ ಆಸ್ಪತ್ರೆ ಅಧಿಕೃತವಾಗಿ ಆರಂಭವಾಯಿತು. ಆರಂಭದಲ್ಲಿ ಕಡಿಮೆ ಹಾಸಿಗೆಗಳೊಂದಿಗೆ ಪ್ರಾರಂಭವಾದ ಈ ಆಸ್ಪತ್ರೆ ಇಂದು ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ದೊಡ್ಡ ವೈದ್ಯಕೀಯ ಕೇಂದ್ರವಾಗಿ ಬೆಳೆಯಾಗಿದೆ.
ಅಪಘಾತಗಳು, ಸಾಂಕ್ರಾಮಿಕ ರೋಗಗಳು ಮತ್ತು ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಮಹತ್ವದ ಪಾತ್ರ ವಹಿಸಿದೆ. ಕೋವಿಡ್-19 ಸಮಯದಲ್ಲೂ ಇಲ್ಲಿ ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿತ್ತು.ಇದನ್ನು ಓದಿ:8 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ..! ಬಜೆಟ್‌ನಲ್ಲಿ ಸಿಎಂ ಭರ್ಜರಿ ಘೋಷಣೆ
ಇದಕ್ಕೂ ಜೊತೆಗೆ ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಸರ್ಕಾರ ಹೊಸ ಯೋಜನೆಗಳನ್ನು ಘೋಷಿಸಿದೆ. ಕಾರವಾರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಎರಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಇದರ ಜೊತೆಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸಮೀಪದ ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸುವ ಯೋಜನೆ ಕೂಡ ಪ್ರಕಟಿಸಲಾಗಿದೆ.
ಈ ಯೋಜನೆಗಳ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಜನರಿಗೆ ಉತ್ತಮ ಮತ್ತು ಸುಲಭ ಆರೋಗ್ಯ ಸೇವೆಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ