ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.Arayna Women's Cotton Printed Floral Straight Kurta with Palazzo Pants and Dupatta
ಗಿರೀಶ್ ಕುಮಾರ್ ನೀಡಿದ ದೂರಿನ ಪ್ರಕಾರ, ರಜತ್ ಕಿಶನ್ ಅವರು ಫೋನ್ ಮೂಲಕ ಕರೆ ಮಾಡಿ ಹಾಗೂ ವಾಯ್ಸ್ ನೋಟ್ ಕಳುಹಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ‘ಡಾಗ್ ಸತೀಶ್ ಜೊತೆ ಸ್ನೇಹ ಮಾಡಬಾರದು’ ಎಂದು ಹೇಳಿ ಒತ್ತಡ ಹಾಕಿದ್ದಾರೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಗಿರೀಶ್ ಕುಮಾರ್ ಅವರ ಕಾರಿನ ಫೋಟೋ ಕಳುಹಿಸಿ ಭಯ ಹುಟ್ಟಿಸುವ ರೀತಿಯಲ್ಲಿ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.
ದೂರಿನಲ್ಲಿ ಮತ್ತೊಂದು ಆರೋಪವೆಂದರೆ, ರಜತ್ ಕಿಶನ್ ಅವರು ಕಾನ್ಫರೆನ್ಸ್ ಕಾಲ್‌ನಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬುದು. ಜೊತೆಗೆ ತಮ್ಮ ಕಾರಿನಲ್ಲಿ ಬಂದು ಕುಳಿತುಕೊಳ್ಳಿ, ಡಾಗ್ ಸತೀಶ್ ಮನೆ ಎಲ್ಲಿದೆ ಎಂದು ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಜತ್ ಕಿಶನ್ ಹಾಗೂ ಕಿರಣ್ ವಿರುದ್ಧ BNS 351(2) ಮತ್ತು 352 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.ಇದನ್ನು ಓದಿ:ವಿಜಯ್ ವಿಚ್ಛೇದನ ವಿವಾದ: 600 ಕೋಟಿ ಆಸ್ತಿಯಲ್ಲಿ 50% ಪಾಲು ಪತ್ನಿ ಸಂಗೀತಾ ಅವರಿಗೆ ಕೊಡಬೇಕಾ..?ಇಲ್ಲಿದೆ ಮಾಹಿತಿ
ರಜತ್ ಕಿಶನ್ ಅವರು ಹಿಂದೆ ಕೂಡ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಅವರ ವಿರುದ್ಧ ಮೊದಲು ಎಫ್‌ಐಆರ್ ದಾಖಲಾಗಿತ್ತು. ಅಲ್ಲದೆ ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ವಿಡಿಯೋ ಮಾಡಿದ ಕಾರಣಕ್ಕೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಈಗ ಮತ್ತೊಮ್ಮೆ ಹೊಸ ಪ್ರಕರಣ ದಾಖಲಾಗಿರುವುದು ಚರ್ಚೆಗೆ ಕಾರಣವಾಗಿದೆ.