Skip to main content
ವಿಡಿಯೋ
general

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕಾಫಿ ತೋಟದ ಮಾಲೀಕ ದಾರುಣ ಸಾವು..!ಇಲ್ಲಿದೆ ಮಾಹಿತಿ

By Ram Chethan
ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕಾಫಿ ತೋಟದ ಮಾಲೀಕ ದಾರುಣ ಸಾವು..!ಇಲ್ಲಿದೆ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದ್ದು, ವಿರಾಜಪೇಟೆಯ ಸಿದ್ದಾಪುರದಲ್ಲಿ ಕಾಫಿ ಬೆಳೆಗಾರ ಗಣಪತಿ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಇದು ಮೂರನೇ ಸಾವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ. ಕಾಡಾನೆಗಳ ದಾಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಹೆಚ್ಚುತ್ತಿದ್ದು, ಮತ್ತೊಂದು ದುರ್ಘಟನೆ ನಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ಪ್ರದೇಶದಲ್ಲಿ ಕಾಫಿ ತೋಟಕ್ಕೆ ಹೋಗಿದ್ದ ಕಾಫಿ ಬೆಳೆಗಾರ ಗಣಪತಿ (49) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ತೋಟದಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಗಣಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Arayna Women's Cotton Printed Floral Straight Kurta with Palazzo Pants and Dupatta

ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿಗಳ ಸಂಖ್ಯೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ. ಕಾಫಿ ತೋಟಗಳು, ಗ್ರಾಮಗಳ ಸುತ್ತಮುತ್ತ ಹಾಗೂ ರಸ್ತೆ ಬದಿಯಲ್ಲಿಯೂ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಜನರು ಮನೆಗಳಿಂದ ಹೊರಗೆ ಬರಲು ಕೂಡ ಹೆದರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಓದಿ:ಗ್ಯಾಸ್ ಸಿಲಿಂಡರ್ ಕದ್ದು ಪರಾರಿಯಾಗಿದ್ದ ಗದಿಮಾರ ಬಂಧನ; ಬಿಡದಿ ಪೊಲೀಸರ ಮಿಂಚಿನ ಕಾರ್ಯಾಚರಣೆ..!

ಸಾಲು ಸಾಲಾಗಿ ನಡೆಯುತ್ತಿರುವ ಈ ದುರ್ಘಟನೆಗಳಿಂದ ಕೊಡಗು ಜಿಲ್ಲೆಯ ಜನರು ತೀವ್ರ ಆತಂಕದಲ್ಲಿದ್ದಾರೆ. ಕಾಡಾನೆಗಳ ದಾಳಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸುತ್ತಿದ್ದಾರೆ. ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಅನಾಹುತಗಳು ಸಂಭವಿಸುವ ಭೀತಿ ವ್ಯಕ್ತವಾಗುತ್ತಿದೆ.