ಬೆಂಗಳೂರು: ಐತಿಹಾಸಿಕ ಹುಸ್ಕೂರು ಗ್ರಾಮದ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಿ ಜಾತ್ರೆ ಹಾಗೂ ಧರ್ಮರಾಯ ಸ್ವಾಮಿ ಜಾತ್ರಾ ಮಹೋತ್ಸವ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಗರದ ಎರಡು ಪ್ರಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗದೆ.
ಎಲ್ಲಿ ಮತ್ತು ಯಾವಾಗ ಬಂದ್?
ಜಾತ್ರೆಯ ಸಂದರ್ಭದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಈ ಕೆಳಗಿನಂತೆ ಆದೇಶ ಹೊರಡಿಸಿದ್ದಾರೆ.
* ವ್ಯಾಪ್ತಿ: ಪರಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿ.
* ಸಮಯ: ಮಾರ್ಚ್ 14ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಿ, ಮಾರ್ಚ್ 15ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ ಇರುವುದಿಲ್ಲ.
ಯಾವುದಕ್ಕೆ ವಿನಾಯಿತಿ?
ಈ ನಿಷೇಧಾಜ್ಞೆಯು ಬಹುತೇಕ ಮದ್ಯದ ಅಂಗಡಿಗಳಿಗೆ ಅನ್ವಯಿಸಲಿದ್ದು, ಕೆಲವು ಹೋಟೆಲ್‌ಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ:
ಕ್ಲಬ್‌ಗಳು ಮತ್ತು ಸ್ಟಾರ್ ಹೋಟೆಲ್‌ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಾರ್ ಮತ್ತು ರೆಸ್ಟೋರೆಂಟ್‌ಗಳು, ವೈನ್ ಶಾಪ್‌ಗಳು ಹಾಗೂ ಎಂ.ಎಸ್.ಐ.ಎಲ್ ಮಳಿಗೆಗಳು ಕಡ್ಡಾಯವಾಗಿ ಮುಚ್ಚಿರಲಿವೆ.
ಪೊಲೀಸ್ ಇಲಾಖೆಯ ಮುನ್ನೆಚ್ಚರಿಕೆ:
ಲಕ್ಷಾಂತರ ಭಕ್ತರು ಸೇರುವ ಈ ಬೃಹತ್ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾಡುವುದು ಅಥವಾ ಸಾಗಿಸುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.