ಘಟನೆಯ ವಿವರ
ಸೋಮವಾರ ಮುಂಜಾನೆ ಸಂಭವಿಸಿದ ಈ ದುರಂತದಲ್ಲಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೋಗಿಗಳನ್ನು ರಕ್ಷಿಸುವ ಕಾರ್ಯಾಚರಣೆಯ ಸಮಯದಲ್ಲಿ ಆಸ್ಪತ್ರೆಯ 11 ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಮುಂಜಾನೆ ಸುಮಾರು 2.30 ರ ಸುಮಾರಿಗೆ ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿ ಕೇವಲ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಮತ್ತು ರಕ್ಷಣಾ ಕಾರ್ಯದಲ್ಲಿ ಯಶಸ್ವಿಯಾದರು.
ರಕ್ಷಣಾ ಕಾರ್ಯ
ಅಗ್ನಿಶಾಮಕ ದಳ, ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳ ಸಂಬಂಧಿಕರ ಸಂಘಟಿತ ಪ್ರಯತ್ನದಿಂದಾಗಿ ರೋಗಿಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಲಾಯಿತು.
ಮುಖ್ಯಮಂತ್ರಿಗಳ ಭೇಟಿ
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ತಿಳಿಸಿದರು.
ಸಾವಿನ ವಿವರ
ಐಸಿಯುನಲ್ಲಿದ್ದ 23 ರೋಗಿಗಳನ್ನು ಬೇರೆ ವಿಭಾಗಗಳಿಗೆ ಸ್ಥಳಾಂತರಿಸಲಾಗಿದ್ದು, ಸ್ಥಳಾಂತರದ ವೇಳೆ 7 ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ. ನಂತರ ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಿಬ್ಬಂದಿಗೆ ಸಿಎಂ ಸೂಚಿಸಿದ್ದಾರೆ.
ಪರಿಹಾರ ಘೋಷಣೆ
ಮೃತರ ಕುಟುಂಬಸ್ಥರಿಗೆ ಮತ್ತು ಗಾಯಗೊಂಡ ಪ್ರತಿಯೊಬ್ಬ ರೋಗಿಗೆ ತಲಾ 25 ಲಕ್ಷ ರೂಪಾಯಿಗಳ ಎಕ್ಸ್-ಗ್ರೇಷಿಯಾ (ಪರಿಹಾರ ಧನ) ವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.