ಐಪಿಎಲ್ 19ನೇ ಆವೃತ್ತಿ ಆರಂಭವಾಗಲು ಇನ್ನೇನು ಎರಡು ದಿನ ಮಾತ್ರ ಬಾಕಿಯಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಭದ್ರತಾ ಸಿದ್ಧತೆಗಳನ್ನು ಪೊಲೀಸರು ಗಟ್ಟಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭದ್ರತೆ ಕುರಿತಂತೆ ವಿಶೇಷ ಮಾಕ್ ಡ್ರಿಲ್ (ಅಣುಕು ಪ್ರದರ್ಶನ) ನಡೆಸಲಾಗುತ್ತಿದೆ.Arayna Women's Cotton Printed Floral Straight Kurta with Palazzo Pants and Dupatta
ಈ ಅಣುಕು ಪ್ರದರ್ಶನದಲ್ಲಿ ಬೆಂಗಳೂರು ನಗರ ಪೊಲೀಸರು, ಎನ್‌ಎಸ್‌ಜಿ (NSG) ಪಡೆ ಸೇರಿದಂತೆ ವಿವಿಧ ಭದ್ರತಾ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ಮಾಕ್ ಡ್ರಿಲ್‌ನಲ್ಲಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವ ವೇಳೆ ಯಾವ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲಾಗುತ್ತದೆ.
ಸ್ಟೇಡಿಯಂಗೆ ಪ್ರವೇಶಿಸುವ ಗೇಟ್‌ಗಳಲ್ಲಿ ಭದ್ರತೆ ಹೇಗಿರಬೇಕು, ಅಭಿಮಾನಿಗಳ ಎಂಟ್ರಿ ಹಾಗೂ ಎಕ್ಸಿಟ್ ವ್ಯವಸ್ಥೆ ಹೇಗೆ ನಿರ್ವಹಿಸಬೇಕು ಎಂಬುದನ್ನು ಗಮನಿಸಿ ಪರಿಶೀಲಿಸಲಾಗುತ್ತದೆ. ಅದಲ್ಲದೆ ಸ್ಟೇಡಿಯಂ ಸುತ್ತಮುತ್ತ ಸೇರುವ ಅಭಿಮಾನಿಗಳನ್ನು ಹೇಗೆ ನಿಯಂತ್ರಿಸಬೇಕು ಮತ್ತು ತಪಾಸಣೆ ಹಾಗೂ ಪರಿಶೀಲನೆಗಳನ್ನು ಯಾವ ರೀತಿಯಲ್ಲಿ ಮಾಡಬೇಕು ಎಂಬುದರ ಬಗ್ಗೆ ಕೂಡ ಅಣುಕು ಪ್ರದರ್ಶನ ನಡೆಯಲಿದೆ.
ಈ ಮಾಕ್ ಡ್ರಿಲ್‌ನಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ. ಸ್ಟೇಡಿಯಂ ಒಳಗಡೆ ಹಾಗೂ ಹೊರಗಡೆ ವಿವಿಧ ಸ್ಥಳಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತಾ ವ್ಯವಸ್ಥೆಯನ್ನು ಪರೀಕ್ಷಿಸಲಾಗುತ್ತಿದೆ.ಇದನ್ನು ಓದಿ:ಆರ್‌ಸಿಬಿ ಪಯಣ: ಮಲ್ಯ ಅವರಿಂದ ಬಿರ್ಲಾ ವರೆಗೆ (2008 - 2026)
ಇದರ ಜೊತೆಗೆ ಸಂಚಾರಿ ಪೊಲೀಸರೂ ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಐಪಿಎಲ್ ಪಂದ್ಯಗಳ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಹಾಗೂ ಅಭಿಮಾನಿಗಳಿಗೆ ಸುರಕ್ಷಿತ ವಾತಾವರಣ ಒದಗಿಸಲು ಈ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ