ಐಪಿಎಲ್ 2026 ಟೂರ್ನಿಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವರ್ಷದ ಐಪಿಎಲ್ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದೆ. ಸಾಮಾನ್ಯವಾಗಿ ಪ್ರತಿ ಐಪಿಎಲ್ ಆವೃತ್ತಿಯ ಮೊದಲ ಪಂದ್ಯಕ್ಕೂ ಮುನ್ನ ಭರ್ಜರಿ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಬಾರಿ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ನಿರ್ಧರಿಸಿದೆ.Arayna Women's Cotton Printed Floral Straight Kurta with Palazzo Pants and Dupatta
ಈ ನಿರ್ಧಾರಕ್ಕೆ ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ದುರ್ಘಟನೆ ಪ್ರಮುಖ ಕಾರಣವಾಗಿದೆ. 2025ರಲ್ಲಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಬಳಿಕ ನಡೆದ ವಿಜಯೋತ್ಸವ ಮೆರವಣಿಗೆಯ ವೇಳೆ ಭಾರೀ ಜನಸಮೂಹದ ನಡುವೆ ಕಾಲ್ತುಳಿತ ಸಂಭವಿಸಿತ್ತು. ಆ ದುರ್ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ದೇಶದಾದ್ಯಂತ ದುಃಖಕ್ಕೆ ಕಾರಣವಾಗಿತ್ತು. ಅದರಿಂದ ಮೃತರಿಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವರ್ಷದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲು ಬಿಸಿಸಿಐ ತೀರ್ಮಾನಿಸಿದೆ ಎಂದು ವರದಿಗಳು ಹೇಳುತ್ತಿವೆ.
ಆದರೂ ಟೂರ್ನಿಯ ಪಂದ್ಯಗಳು ಎಂದಿನಂತೆ ನಡೆಯಲಿವೆ. ಮೊದಲ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದ್ದು, ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಕಾದಾಟ ನಡೆಯಲಿದೆ. ಐಪಿಎಲ್ ಆರಂಭಕ್ಕೆ ಕ್ರಿಕೆಟ್ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ.
ಇನ್ನೊಂದೆಡೆ, ಐಪಿಎಲ್ 2026 ಟೂರ್ನಿಯ ಸಮಾರೋಪ ಸಮಾರಂಭವನ್ನು ಮೇ 31 ರಂದು ನಡೆಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ತಿಳಿಸಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.ಇದನ್ನು ಓದಿ:ಐಪಿಎಲ್‌ಗೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭದ್ರತಾ ಮಾಕ್ ಡ್ರಿಲ್..! ಸಾವಿರಕ್ಕೂ ಹೆಚ್ಚು ಪೊಲೀಸರ ಭಾಗಿ
ಇದು ಮೊದಲ ಬಾರಿ ಅಲ್ಲ, ಈ ಹಿಂದೆ ಕೂಡ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿದೆ. 2019ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅವರ ಸ್ಮರಣಾರ್ಥ ಆ ವರ್ಷದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿ, ಅದರಿಗಾಗಿ ಮೀಸಲಿಟ್ಟಿದ್ದ ಹಣವನ್ನು ಹುತಾತ್ಮರ ಕುಟುಂಬಗಳಿಗೆ ಸಹಾಯವಾಗಿ ನೀಡಲಾಗಿತ್ತು.