Skip to main content
ವಿಡಿಯೋ
1/2
weather

ಬೆಂಗಳೂರಲ್ಲಿ 'ವರುಣಾರ್ಭಟ': ಟ್ರಾಫಿಕ್ ಜಾಮ್ ಆತಂಕದ ನಡುವೆ ತಂಪಾದ ಸಿಲಿಕಾನ್ ಸಿಟಿ..!

By Sushmitha R
ಬೆಂಗಳೂರಲ್ಲಿ 'ವರುಣಾರ್ಭಟ': ಟ್ರಾಫಿಕ್ ಜಾಮ್ ಆತಂಕದ ನಡುವೆ ತಂಪಾದ ಸಿಲಿಕಾನ್ ಸಿಟಿ..!

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಬೇಗೆಯನ್ನು ತಣಿಸಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಬೇಗೆಯನ್ನು ತಣಿಸಿದೆ. ಬೆಂಗಳೂರು ನಗರದಲ್ಲಿ ಸುಮಾರು 18.8 ಮಿ.ಮೀ. ಮಳೆ ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 19 ಮಿ.ಮೀ. ಮಳೆಯಾಗಿದೆ. ಇದರಿಂದ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಕಡಿಮೆಯಾಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ.

ಇಂದು ಸೋಮವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನಲ್ಲಿ ಗಾಳಿ ಮತ್ತು ಮಳೆಯ ಅಬ್ಬರ ಇರಲಿದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯ ಸಾಧ್ಯತೆಯಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಸೇರಿದಂತೆ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. HARLEY-DAVIDSON X440 S Motorcycle 440cc Matte Black booking for Ex-Showroom| 5 Years Warranty

ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಎಲ್ಲೆಲ್ಲಿ ಮಳೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗಾಳಿ ಸಹಿತ ಜೋರಾದ ಮಳೆಯಾಗಲಿದೆ. ಸುದೀರ್ಘ ಕಲಾಪ‌ ನಡೆದರೆ ಶಾಸಕರು ಸೋಲುವುದೇಕೆ ? : ಜಿಜ್ಞಾಸೆಯ ಮಧ್ಯೆಯೂ ಕಂಡ ಬೆಳಕಿಂಡಿ

ಕರಾವಳಿ ಜಿಲ್ಲೆಗಳಲ್ಲಿ ಗುಸ್ತಿ ಗಾಳಿ 30-40 ಕಿ.ಮೀ. ಸಹಿತ ಮಳೆಯ ನಿರೀಕ್ಷೆಯಿದೆ. ಹವಾಮಾನ ಇಲಾಖೆಯ, ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಈ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ರೈತರು, ಪ್ರಯಾಣಿಕರು ಮತ್ತು ನಗರ ನಿವಾಸಿಗಳು ಎಚ್ಚರಿಕೆಯಿಂದಿರುವುದು ಅವಶ್ಯಕ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗಬಹುದು. ಬೆಂಗಳೂರಿನಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯ ಸಾಧ್ಯತೆ ಹೆಚ್ಚಿದೆ.ನಕ್ಸಲ್‌ವಾದ ನಿರ್ಮೂಲನೆ ಅಮಿತ್ ಶಾ ಐತಿಹಾಸಿಕ ಘೋಷಣೆ..!

ತಾಪಮಾನ ಸಹ ತಗ್ಗುವುದರಿಂದ ತಂಪಾದ ವಾತಾವರಣ ಅನುಭವಿಸಲು ಸಾಧ್ಯವಾಗಿದೆ. ಒಟ್ಟಾರೆಯಾಗಿ, ಬೇಸಿಗೆಯ ಈ ಮಳೆ ರೈತರಿಗೆ ಸಹಾಯಕವಾಗಿದ್ದರೂ, ನಗರ ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ಸಮಸ್ಯೆಗಳನ್ನು ತಂದೊಡ್ಡಬಹುದು.