ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದ ಶೀತಲಾದೇವಿ ದೇವಾಲಯದಲ್ಲಿ ಈ ಘಟನೆ ನಡೆದಿದೆ.
ಚೈತ್ರ ಮಾಸದ ಕೊನೆಯ ಮಂಗಳವಾರವಾಗಿದ್ದರಿಂದ, ದೇವಿಯ ದರ್ಶನ ಪಡೆದರೆ ಪುಣ್ಯ ಲಭಿಸುತ್ತದೆ ಎಂಬ ನಂಬಿಕೆಯಿಂದ ಬೆಳ್ಳಂಬೆಳಗ್ಗೆಯೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಜಮಾಯಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣ ಮೀರಿತು.
ಕಾಲ್ತುಳಿತಕ್ಕೆ ಕಾರಣ:
ಮಂಗಳವಾರ ಮುಂಜಾನೆ ದೇವಿಯ ವಿಶೇಷ ಪೂಜೆ ಮತ್ತು ಆರತಿಯ ಸಮಯದಲ್ಲಿ ಭಕ್ತರು ಏಕಾಏಕಿ ಗರ್ಭಗುಡಿಯತ್ತ ನುಗ್ಗಲು ಪ್ರಯತ್ನಿಸಿದರು ಎನ್ನಲಾಗಿದೆ. YouBella Jewellery Stylish Gold Plated Floral Necklace Jewellery Set with Earrings for Women and Girls
ಈ ವೇಳೆ ನೂಕುನುಗ್ಗಲು ಉಂಟಾಗಿ ಅನೇಕ ಮಹಿಳೆಯರು ಕೆಳಗೆ ಬಿದ್ದಿದ್ದಾರೆ. ಜನದಟ್ಟಣೆ ಹೆಚ್ಚಾಗಿದ್ದರಿಂದ ಕೆಳಗೆ ಬಿದ್ದವರ ಮೇಲೆ ಇತರರು ತುಳಿದುಕೊಂಡು ಹೋಗಿದ್ದಾರೆ. ಈ ಭೀಕರ ಕಾಲ್ತುಳಿತದಲ್ಲಿ 8 ಮಂದಿ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಗಾಯಾಳುಗಳ ಸ್ಥಿತಿ:
ಈ ಘಟನೆಯಲ್ಲಿ 12ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಬಿಹಾರ ಶರೀಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.ಮೈಸೂರಿನಲ್ಲಿ ತೃತೀಯ ಲಿಂಗಿಗಳ ಮೇಲೆ ತಲ್ವಾರ್ ದಾಳಿ: 200 ರೂಪಾಯಿ ಹಣದ ವಿಚಾರಕ್ಕೆ ಕಿರಾತಕರ ಹುಚ್ಚಾಟ..!
ಘಟನೆ ತಿಳಿಯುತ್ತಿದ್ದಂತೆಯೇ ನಳಂದ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಆಡಳಿತದ ವೈಫಲ್ಯದ ಆರೋಪ:
ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುವ ಮುನ್ಸೂಚನೆ ಇದ್ದರೂ ಸಹ ದೇವಾಲಯದ ಆವರಣದಲ್ಲಿ ಸೂಕ್ತ ಭದ್ರತೆ ಮತ್ತು ಬ್ಯಾರಿಕೇಡ್ ವ್ಯವಸ್ಥೆ ಮಾಡಿರಲಿಲ್ಲ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 6 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ..!
ಹಬ್ಬದ ದಿನಗಳಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರ ಸಂಖ್ಯೆ ತೀರಾ ಕಡಿಮೆ ಇತ್ತು ಎಂಬ ಆರೋಪಗಳು ಕೇಳಿಬರುತ್ತಿವೆ.