ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ಪ್ರತಿರೋಧದ ನಡುವೆಯೂ, ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆ-2026 ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಮಾರ್ಚ್ 25 ರಂದು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾಗಿದ್ದ ಈ ಮಸೂದೆ ಈಗ ಅಧಿಕೃತವಾಗಿ ಕಾಯ್ದೆಯಾಗಿ ಜಾರಿಗೆ ಬರಲಿದೆ.
ಮಸೂದೆಯ ಪ್ರಮುಖ ಬದಲಾವಣೆಗಳು:
ಸ್ವಯಂ ಗುರುತಿಸಿಕೊಳ್ಳುವಿಕೆ ರದ್ದು: 2019ರ ಕಾಯ್ದೆಯ ಸೆಕ್ಷನ್ 4(2)ರ ಅಡಿಯಲ್ಲಿ ವ್ಯಕ್ತಿಗಳು ತಮ್ಮ ಲಿಂಗತ್ವದ ಗ್ರಹಿಕೆಯ ಆಧಾರದ ಮೇಲೆ ಸ್ವಯಂ ಗುರುತಿಸಿಕೊಳ್ಳಲು ಇದ್ದ ಅವಕಾಶವನ್ನು ಈ ತಿದ್ದುಪಡಿಯಲ್ಲಿ ರದ್ದುಗೊಳಿಸಲಾಗಿದೆ.Shining Diva Fashion Latest Stylish Rose Gold Tulip Design Earrings Necklace Jewellery Set For Women (10103s)
ಸೀಮಿತ ವ್ಯಾಖ್ಯಾನ: ಹೊಸ ಕಾಯ್ದೆಯ ಪ್ರಕಾರ, ಕೇವಲ ಜೈವಿಕ ಕಾರಣಗಳಿಂದ ಸಾಮಾಜಿಕ ಬಹಿಷ್ಕಾರಕ್ಕೊಳಗಾದ ಹಿಜ್ರಾ, ಕಿನ್ನರ್, ಅರವಾಣಿ, ಜೋಗತಿಯಂತಹ ನಿರ್ದಿಷ್ಟ ಸಾಂಸ್ಕೃತಿಕ ಸಮುದಾಯದವರು, ಅಂತರಲಿಂಗಿಗಳು ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಮಾತ್ರವೇ ಲಿಂಗತ್ವ ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ.
2019ರ ಕಾಯ್ದೆಯಲ್ಲಿದ್ದ ವ್ಯಾಖ್ಯಾನವು ಅಸ್ಪಷ್ಟವಾಗಿದ್ದು, ನಿಜವಾದ ಸಂತ್ರಸ್ತರನ್ನು ಗುರುತಿಸಲು ಅಡ್ಡಿಯಾಗುತ್ತಿತ್ತು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ತಮ್ಮ ಯಾವುದೇ ತಪ್ಪಿಲ್ಲದೆ ಜೈವಿಕ ಕಾರಣಗಳಿಂದ ತೀವ್ರ ಸಾಮಾಜಿಕ ಸಮಸ್ಯೆ ಎದುರಿಸುತ್ತಿರುವವರ ಹಕ್ಕುಗಳನ್ನು ರಕ್ಷಿಸುವುದೇ ಈ ತಿದ್ದುಪಡಿಯ ಮುಖ್ಯ ಉದ್ದೇಶ ಎಂದು ಸರ್ಕಾರ ಹೇಳಿದೆ.ನಾಸಿಕ್‌ನ ಕಾಮುಕ ದೇವಮಾನವನ ಕರಾಳ ಮುಖ ಬಯಲು: ಮಾಟ-ಮಂತ್ರದ ಹೆಸರಲ್ಲಿ ಅತ್ಯಾಚಾರ..!
ಈ ಮಸೂದೆಯು ಸಲಿಂಗಕಾಮಿಗಳು ಮತ್ತು ಲೆಸ್ಬಿಯನ್ನರನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
2019ರ ಕಾಯ್ದೆಯಲ್ಲಿ ಲಿಂಗತ್ವ ಬದಲಾವಣೆಯ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದವರನ್ನೂ ಒಳಗೊಂಡಂತೆ ಎಲ್ಲರನ್ನೂ ವಿಶಾಲ ಅರ್ಥದಲ್ಲಿ ಗುರುತಿಸಲಾಗುತ್ತಿತ್ತು. ಆದರೆ, ಹೊಸ ತಿದ್ದುಪಡಿಯು ವೈದ್ಯಕೀಯ ಪುರಾವೆ ಅಥವಾ ನಿರ್ದಿಷ್ಟ ಸಾಮಾಜಿಕ ಚಹರೆಗಳನ್ನು ಕಡ್ಡಾಯಗೊಳಿಸಿರುವುದು ವ್ಯಕ್ತಿಯ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರ ಮತ್ತಷ್ಟು ದುಬಾರಿ; ಇಂದಿನಿಂದಲೇ ಟೋಲ್ ದರ ಹೆಚ್ಚಳ!