Skip to main content
ವಿಡಿಯೋ
1/2
general

SSLC ಪರೀಕ್ಷೆಯಲ್ಲಿ ಹಿಂದಿ-ತೃತೀಯ ಭಾಷೆಗಳಿಗೆ ಗ್ರೇಡ್: ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ...!

By Sushmitha R
SSLC ಪರೀಕ್ಷೆಯಲ್ಲಿ ಹಿಂದಿ-ತೃತೀಯ ಭಾಷೆಗಳಿಗೆ ಗ್ರೇಡ್: ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ...!

ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್‌ಗಳನ್ನು ನೀಡುವ ಸರ್ಕಾರದ ಪ್ರಸ್ತಾವವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್‌ಗಳನ್ನು ನೀಡುವ ಸರ್ಕಾರದ ಪ್ರಸ್ತಾವವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಎಂಬುವರು ಈ ಅರ್ಜಿ ಸಲ್ಲಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ಹಿಂದಿ ಭಾಷೆ ಸೇರಿದಂತೆ ತೃತೀಯ ಭಾಷೆಗಳು ಕಡ್ಡಾಯವಲ್ಲ ಎಂದು ಘೋಷಿಸಿದ್ದರು. ಈ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್‌ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದರು.

ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರ ಜಾರಿಗೊಳಿಸುವುದಾಗಿ ಸಚಿವರು ತಿಳಿಸಿದ್ದರು. ಆದರೆ ಅರ್ಜಿದಾರರು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಸಚಿವರು ನಿರ್ಧಾರ ಪ್ರಕಟಿಸುವ ಮುನ್ನ ಸಾರ್ವಜನಿಕ ಚರ್ಚೆ ನಡೆಸಿಲ್ಲ, ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಮತ್ತು ಭಾಷಾ ತಜ್ಞರ ಸಲಹೆಯನ್ನೂ ಪಡೆದಿಲ್ಲ ಎಂದು ಆರೋಪಿಸಿದ್ದಾರೆ. ಈ ನಿರ್ಧಾರ ಏಕಪಕ್ಷೀಯವಾಗಿ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.Barrfy Collection's Plastic Stone's Bangles Set (Pack of 4 Bangles)-Red

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಮಾರ್ಚ್ 31ರಂದು ಸಚಿವರ ಈ ಹೇಳಿಕೆ ಹೊರ ಬಿದ್ದಿರುವುದರಿಂದ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೀಡಾಗಿದ್ದಾರೆ. ಇದುವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಅಥವಾ ಅಧಿಸೂಚನೆ ಹೊರಡಿಸಲಾಗಿಲ್ಲ. ಸಚಿವರ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅರ್ಜಿಯಲ್ಲಿ ಮುಖ್ಯವಾಗಿ ಎರಡು ಸಂವಿಧಾನಿಕ ಅಂಶಗಳನ್ನು ಹಿಡಿಯಲಾಗಿದೆ.

ಸಚಿವರ ನಿರ್ಧಾರ ಸಂವಿಧಾನದ ಪರಿಚ್ಛೇದ 14ರಡಿ ಸಮಾನತೆ ಹಕ್ಕನ್ನು ಉಲ್ಲಂಘಿಸುತ್ತದೆ ಎಂದೂ, ಪರಿಚ್ಛೇದ 21ಎರಡಿ ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರುತ್ತದೆ ಎಂದೂ ಆರೋಪಿಸಲಾಗಿದೆ. ಯುದ್ಧ ಮುಕ್ತಾಯದ ಹಂತ: ಇರಾನ್‌ಗೆ ಭಾರೀ ಎಚ್ಚರಿಕೆ ನೀಡಿದ ಅಮೆರಿಕದ ಅಧ್ಯಕ್ಷ ಟ್ರಂಪ್..!

ವಿದ್ಯಾರ್ಥಿಗಳ ಭವಿಷ್ಯವನ್ನು ಅಸ್ಥಿರಗೊಳಿಸುವ ಮತ್ತು ತಾರತಮ್ಯ ಮಾಡುವಂತಹ ನಿರ್ಧಾರ ಇದು ಎಂದು ಅರ್ಜಿದಾರರು ಹೇಳಿದ್ದಾರೆ. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಇಂತಹ ನೀತಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಒತ್ತಾಯಿಸಲಾಗಿದೆ.

ಆದ್ದರಿಂದ ಸಚಿವರ ವಿವಾದಾತ್ಮಕ ಹೇಳಿಕೆಗಳ ಜಾರಿಗೆ ತಡೆ ನೀಡುವಂತೆ ಮತ್ತು ನಿರ್ಧಾರವನ್ನು ರದ್ದುಪಡಿಸುವಂತೆ ಹೈಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರ ಮತ್ತಷ್ಟು ದುಬಾರಿ; ಇಂದಿನಿಂದಲೇ ಟೋಲ್ ದರ ಹೆಚ್ಚಳ!

ಈ ಪ್ರಕರಣವು ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರಬಹುದು ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.